Arogya Sanjeevini :ಸರ್ಕಾರಿ ನೌಕರರ ಕುಟುಂಬಕ್ಕೂ ಉಚಿತ ಆರೋಗ್ಯ ವಿಮಾ ಯೋಜನೆಯನ್ನು ರಾಜ್ಯ ಸರ್ಕಾರವು ಜಾರಿಗೆ ತಂದಿದೆ. ಈ ಯೋಜನೆಗೆ ಆರೋಗ್ಯ ಸಂಜೀವಿನಿ ಎನ್ನುವ ಹೆಸರನ್ನು ನೀಡಲಾಗಿದೆ. ಈ ಯೋಜನೆಯ ಅಡಿಯಲ್ಲಿ ಸರ್ಕಾರಿ ನೌಕರರ ಕುಟುಂಬದ ಸದಸ್ಯರ ನೋಂದಣಿಯು ಕಡ್ಡಾಯವಾಗಿದ್ದು, ಯಾವೆಲ್ಲಾ ದಾಖಲೆಗಳ ಅಗತ್ಯ ಇದೆ ಎನ್ನುವುದಕ್ಕೆ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ತಿಳಿಯಿರಿ.
ಕರ್ನಾಟಕ ರಾಜ್ಯ ಸರ್ಕಾರದ ಈ ಆರೋಗ್ಯ ಸಂಜೀವಿನಿ ಯೋಜನೆಯ ಲಾಭವನ್ನು ಪಡೆದುಕೊಳ್ಳಲು ಅರ್ಹ ಸರ್ಕಾರಿ ನೌಕರರು ಒಂದಷ್ಟು ದಾಖಲೆಗಳನ್ನು ಸಲ್ಲಿಸಬೇಕಾಗಿರುವುದು ಕಡ್ಡಾಯವಾಗಿದೆ. ಸರ್ಕಾರಿ ನೌಕರನ ಪತ್ನಿ ಅಥವಾ ಪತ್ನಿಯ ಉದ್ಯೋಗದ ವಿವರ, ತಂದೆಯ ವಿವರ, ತಾಯಿ, ಮಲ ತಾಯಿ, ಮಕ್ಕಳ ಮಾಹಿತಿಯನ್ನು ನಮೂದಿಸಬೇಕು.
ಕಡ್ಡಾಯವಾಗಿರುವ ದಾಖಲೆಗಳು ಈ ರೀತಿ ಇವೆ.
ಸರ್ಕಾರಿ ನೌಕಕರು ಆರೋಗ್ಯ ಸಂಜೀವಿನಿ ಯೋಜನೆಗೆ ಒಳಪಡುವುದಕ್ಕೆ ಅರ್ಜಿಯನ್ನು ಸಲ್ಲಿಸುವುದಕ್ಕಾಗಿ ಈ ಕೆಳಗೆ ತಿಳಿಸಲಾಗಿರುವ ದಾಖಲೆಗಳನ್ನು ನೀಡಬೇಕಾಗಿದೆ.
ಸರ್ಕಾರಿ ನೌಕರನ ಹಾಗೂ ಆತನ ಕುಟುಂಬದ ಅರ್ಹ ಸದಸ್ಯರ ಭಾವಚಿತ್ರ ಕಡ್ಡಾಯವಾಗಿದೆ. ಅಂದರೆ ಅರ್ಹರಾದ ಪ್ರತಿಯೊಬ್ಬರ ಭಾವಚಿತ್ರವನ್ನು ಪ್ರತ್ಯೇಕವಾಗಿ ಸೇರಿಸಬೇಕು. ಅಲ್ಲದೇ ಪ್ರತಿ ಐದು ವರ್ಷಗಳಿಗೊಮ್ಮೆ ಹೊಸ ಭಾವಚಿತ್ರವನ್ನು ಸಲ್ಲಿಸಬೇಕು.
ಎಲ್ಲರ ಸರಿಯಾದ ಜನ್ಮ ದಿನಾಂಕ ದಾಖಲೆಗಳು
ಎಲ್ಲರ ಆಧಾರ್ ಕಾರ್ಡ್ ಗಳು
ಅರ್ಹ ಸದಸ್ಯರ ವೇತನ ಚೀಟಿಗಳು
ಕಾನೂನು ದಾಖಲೆಗಳು ಅಂದರೆ ದತ್ತು ಪಡೆದಿರುವುದು, ವಿವಾಹ ಇನ್ನಿತರೆ ದಾಖಲೆಗಳಾಗಿರುತ್ತದೆ.
Read More
ಆಸ್ತಿ ಮತ್ತು ಭೂಮಿ ನೊಂದಣಿಯಲ್ಲಿ ಹೊಸ ನಿಯಮ ಜಾರಿಗೆ!
ಈ 14 ಬೆಳೆಗಳ ಕನಿಷ್ಠ ಬೆಂಬಲ ಬೆಲೆಯಲ್ಲಿ ಏರಿಕೆ: ಮಹತ್ವದ ನಿರ್ಣಯ ಮಾಡಿದ ಕೇಂದ್ರ ಸಂಪುಟ!
ಸುಲಭವಾಗಿ ಇ-ಸ್ವತ್ತು ದಾಖಲೆಯನ್ನು ನಿಮ್ಮ ಮೊಬೈಲ್ನಲ್ಲೇ ಉಚಿತವಾಗಿ ಪಡೆಯಬಹುದು.
MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.