SORABA ; ಫಾರ್ಚೂನರ್ ಕಾರಿನಲ್ಲಿ ಬಂದ ಖದೀಮರು ಹಸುವನ್ನು (Cow) ಕದ್ದು ಪರಾರಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ (Soraba) ನಡೆದಿದೆ.
ಹಸು ಕಳವು ಮಾಡುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. KA 01 MZ 5843 ಬೂದು ಬಣ್ಣದ ಟೊಯೋಟಾ FORTUNER ಕಾರು ಕಳ್ಳರು ಮಂಕಿ ಕ್ಯಾಪ್ ಹಾಕಿಕೊಂಡು ಬಂದು, ಆಕಳುವೊಂದನ್ನು ಕಳ್ಳತನ ಮಾಡಿದ್ದಾರೆ.
ಹಸು ಕದ್ದ ವಿಷಯ ತಿಳಿದ ಕೂಡಲೇ ಸ್ಥಳೀಯರು ಕಾರನ್ನು ಅಡ್ಡ ಹಾಕಲು ಯತ್ನಿಸಿದ್ದಾರೆ. ಆದರೆ, ಕಳ್ಳರು ಸ್ಥಳೀಯರ ಮೇಲೆ ಕಾರು ಹತ್ತಿಸುವ ಯತ್ನಿಸಿದ್ದಾರೆ.
ಘಟನೆ ಕುರಿತು ಸ್ಥಳೀಯರು ಸೊರಬ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸೊರಬದಲ್ಲಿ ಇತ್ತೀಚೆಗೆ ಹಸು ಕಳವು ಹೆಚ್ಚಾಗುತ್ತಿದೆ. ಹೀಗಾಗಿ ಹಸು ಕಳ್ಳರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.