Thirthahalli

ತೀರ್ಥಹಳ್ಳಿ : ದನಕಳ್ಳರ ಬಂಧನ, ರಿಡ್ಜ್ ಕಾರು ವಶಕ್ಕೆ

ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟೆಹಕ್ಕಲು ಗ್ರಾಮದಲ್ಲಿ ದನಕಳ್ಳತನ ಮಾಡಿದ್ದ ಶಿವಮೊಗ್ಗದ ಟಿಪ್ಪುನಗರ ನಿವಾಸಿಗಳೆನ್ನಲಾದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ರಿಡ್ಜ್ ಕಾರನ್ನು ವಶಪಡಿಸಿಕೊಂಡಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಜನವರಿ 25ರಂದು ಬೆಳಗಿನ ಜಾವ, ಕಟ್ಟೆಹಕ್ಕಲು ಗ್ರಾಮದ ನಿವಾಸಿ ತುಂಬ್ರಿಮನೆ ದೇವರಾಜ ಎಂ.ಎಸ್. ಅವರಿಗೆ ಸೇರಿದ ಹಸುವನ್ನು ಯಾರೋ ಕಳ್ಳರು ಕಳುವು ಮಾಡಿಕೊಂಡು ಹೋಗಿದ್ದಾರೆಂದು ತೀರ್ಥಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಗಳ ಪತ್ತೆಗೆ ವಿಶೇಷ ತಂಡವನ್ನು ರಚಿಸಿದ್ದರು.

ತೀರ್ಥಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಇಮ್ರಾನ್ ಬೇಗ್ ಅವರ ನೇತೃತ್ವದಲ್ಲಿ, ಸಿಬ್ಬಂದಿಗಳಾದ ಸಿ.ಎಚ್.ಸಿ. ಲಿಂಗೇಗೌಡ, ಕುಮಾರ್, ವಿಜಯ್, ಸಿಪಿಸಿ ವೀರೇಂದ್ರ, ಪ್ರಸಾದ್, ದೀಪಕ್, ಮಂಜುನಾಥ ಹಂಪಿಹೊಳಿ, ಮಂಜುನಾಥ ದೋಣಿಕಲ್, ಮೋಹನ ಹಾಗೂ ವಿಜಯ ಕುಮಾರ್ ಅವರನ್ನು ಒಳಗೊಂಡ ತಂಡವು ವಿಶೇಷ ಮಾಹಿತಿಯ ಆಧಾರದಲ್ಲಿ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಯಿತು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ಬಂಧಿತರನ್ನು ಮುಬಾರಕ್ (25) – ಶಿವಮೊಗ್ಗ ಆರ್‌ಎಂಎಲ್ ನಗರ, ಅಹ್ಮದ್ ಬೇಗ್ (25) ಹಾಗೂ ಮುಕ್ರಮವುಲ್ಲಾ (21) – ಟಿಪ್ಪುನಗರ, ಶಿವಮೊಗ್ಗ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಸುಮಾರು ₹2 ಲಕ್ಷ ಮೌಲ್ಯದ ರಿಡ್ಜ್ ಕಾರನ್ನು ಪೊಲೀಸರು ಅಮಾನತುಗೊಳಿಸಿಕೊಂಡಿದ್ದಾರೆ.

ಈ ಪ್ರಕರಣವನ್ನು ಭೇದಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಅವರು ಅಭಿನಂದಿಸಿದ್ದಾರೆ.

ಪಾರ್ಶ್ವವಾಯುಗೆ ತುತ್ತಾಗಿದ್ದ ಚಿರತೆ ‘ಭದ್ರಾ’ಗೆ ಎಂಆರ್‌ಐ ಸ್ಕ್ಯಾನಿಂಗ್

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650