THIRTHAHALLI : ಕಾಲುಜಾರಿ ಹಳ್ಳಕ್ಕೆ ಬಿದ್ದು ಮೃತಪಟ್ಟ ರೈತನ ಕುಟುಂಬಕ್ಕೆ ₹ 5 ಲಕ್ಷ ಪರಿಹಾರ ಧನದ ಚೆಕ್ ವಿತರಣೆ

Written by Mahesha Hindlemane

Published on:

THIRTHAHALLI | ತಾಲೂಕಿನ ದೇವಂಗಿ ಗ್ರಾಪಂ ವ್ಯಾಪ್ತಿಯ ಉಂಟೂರು ಹಳ್ಳದಲ್ಲಿ ಜು.30 ರಂದು ಕೃಷ್ಣಮೂರ್ತಿ ನಾಯ್ಕ (55) ಎಂಬ ರೈತ ಕಾಲುಜಾರಿ ಹಳ್ಳಕ್ಕೆ ಬಿದ್ದು ಮೃತಪಟ್ಟಿದ್ದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಕೃಷ್ಣಮೂರ್ತಿ ನಾಯ್ಕ ಅವರ ಕುಟುಂಬದವರಿಗೆ ಪ್ರಾಕೃತಿಕ ವಿಕೋಪದ ಅಡಿಯಲ್ಲಿ ಸರ್ಕಾರದಿಂದ ನೀಡುವ ಪರಿಹಾರ ನಿಧಿಯ 5 ಲಕ್ಷ ರೂಪಾಯಿಗಳ ಚೆಕ್ ಅನ್ನು ಮೃತರ ಪುತ್ರ ಪ್ರಸನ್ನರವರಿಗೆ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಸೋಮವಾರ ತೀರ್ಥಹಳ್ಳಿ ತಹಶೀಲ್ದಾರ್ ಕಛೇರಿಯಲ್ಲಿ ವಿತರಿಸಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಜಕ್ಕಣ್ಣ ಗೌಡರ್, ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳಾದ ಶೈಲಾ, ಕ್ಷೇತ್ರದ ಶಿಕ್ಷಣಾಧಿಕಾರಿ ಗಣೇಶ್ ಸೇರಿದಂತೆ ಅನೇಕ ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹೊಸನಗರದಲ್ಲಿ ಶಿಕ್ಷಕರ ಪ್ರತಿಭಟನೆ, ತಹಶೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಕೆ

Leave a Comment