Ganja | ಅಡಿಕೆ ಗಿಡಗಳ ಮಧ್ಯೆ ಬೆಳೆದಿದ್ದ ₹ 2.50 ಲಕ್ಷ ಮೌಲ್ಯದ ಗಾಂಜಾ ಗಿಡಗಳು ವಶಕ್ಕೆ

Written by malnadtimes.com

Published on:

Thirthahalli | ಶಿವಮೊಗ್ಗ (Shivamogga) ಜಿಲ್ಲೆಯ ತೀರ್ಥಹಳ್ಳಿ ಹುಂಚದಕಟ್ಟೆ ಗ್ರಾಪಂ ವ್ಯಾಪ್ತಿಯ ಹುತ್ತಳ್ಳಿ (Hutthalli) ಗ್ರಾಮದ ಗುರುಮೂರ್ತಿ ಎಂಬವರು ತನ್ನ ವಾಸದ ಮನೆಯ ಹಿಂಭಾಗದ ಅಡಿಕೆ ತೋಟ (Arecanut Plant)ದಲ್ಲಿ ಅಕ್ರಮವಾಗಿ ಗಾಂಜಾ (Ganja) ಗಿಡಗಳನ್ನು ಬೆಳೆದಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು (Police) ದಾಳಿ ನಡೆಸಿ ಅಕ್ರಮ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಜಿ.ಕೆ, ಎಎಸ್ಪಿ ಅನಿಲ್ ಕುಮಾರ್ ಭೂಮಾರೆಡ್ಡಿ, ಮಾರ್ಗದರ್ಶನದಲ್ಲಿ ತೀರ್ಥಹಳ್ಳಿ ಡಿವೈಎಸ್ಪಿ ಗಜಾನನ ವಾಮನ ಸುತಾರ ಮತ್ತು ಪೊಲೀಸ್ ಸಿಬ್ಬಂದಿಗಳನ್ನೊಳಗೊಂಡ ತಂಡ ಈ ದಾಳಿ ನಡೆಸಿತ್ತು.

ಅಡಿಕೆ ಗಿಡಗಳ ಮಧ್ಯೆ ಬೆಳೆದಿದ್ದ ಅಂದಾಜು 2.50 ಲಕ್ಷ ರೂ. ಮೌಲ್ಯದ 9.524 ಕೆ.ಜಿ. ತೂಕದ ಒಟ್ಟು 14 ಹಸಿ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದು ಆರೋಪಿ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Read More

ಶಾಂತಿ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ; ರಿಪ್ಪನ್‌ಪೇಟೆ ನೂತನ ಪಿಎಸ್ಐ ಖಡಕ್ ಎಚ್ಚರಿಕೆ

Leave a Comment