THIRTHAHALLI | ಧರೆ ಕುಸಿತ, ಸಂಚಾರ ಬಂದ್ !

Written by malnadtimes.com

Updated on:

THIRTHAHALLI | ಮಲೆನಾಡಿನಾದ್ಯಂತ ಸುರಿಯುತ್ತಿರುವ ಭಾರಿ ಮಳೆ (Heavy Rain)ಯಿಂದಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ರಾಷ್ಟ್ರೀಯ ಹೆದ್ದಾರಿ ಕುರುವಳ್ಳಿ – ಬಾಳೆಬೈಲು ಬೈಪಾಸ್ ರಸ್ತೆಯಲ್ಲಿ ಧರೆ ಕುಸಿದಿದ್ದು ತಾತ್ಕಾಲಿಕವಾಗಿ ವಾಹನ (Vehicles) ಸಂಚಾರ ಸ್ಥಗಿತಗೊಳಿಸಲಾಗಿದೆ.

WhatsApp Group Join Now
Telegram Group Join Now
Instagram Group Join Now

ರಾಷ್ಟ್ರೀಯ ಹೆದ್ದಾರಿ 169ಎ ಬೈಪಾಸ್‌ ರಸ್ತೆಯಲ್ಲಿ ಈ ಘಟನೆ ನಡೆದಿದ್ದು ರಸ್ತೆಯ ಮೇಲೆ ಮಣ್ಣು ಕುಸಿದು ಬಿದ್ದಿದ್ದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಜೆಸಿಬಿ ಯಂತ್ರ ಬಳಸಿ ಮಣ್ಣು ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.

2023ರಲ್ಲಿ 57 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಬದಲಿ ಸೇತುವೆ ಮಾರ್ಗ ಇದಾಗಿದ್ದು ಧರೆ ಕುಸಿದಿದ್ದರಿಂದ ಸದ್ಯ ಬದಲಿ ಮಾರ್ಗವಾಗಿ ತೀರ್ಥಹಳ್ಳಿ ಪಟ್ಟಣದ ಮೂಲಕ ಕಮಾನು ಸೇತುವೆ ಮೂಲಕ ಸಂಚರಿಸಬೇಕಿದೆ.

ಇನ್ನೂ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಎನ್.ಆರ್.ಪುರ, ಶೃಂಗೇರಿ, ಮೂಡಿಗೆರೆ, ಕಳಸ ಹಾಗೂ ಶಿವಮೊಗ್ಗ ಜಿಲ್ಲೆಯ ಹೊಸನಗರ, ತೀರ್ಥಹಳ್ಳಿ ಮತ್ತು ಸಾಗರ ತಾಲೂಕಿನಾದ್ಯಂತ ಧಾರಾಕಾರವಾಗಿ ಬಿಟ್ಟುಬಿಡದೆ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ಥಗೊಂಡಿದೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಮುಂಜಾಗ್ರತಾ ಕ್ರಮವಾಗಿ ಸಾಗರ ಮತ್ತು ಹೊಸನಗರ ತಾಲೂಕಿನಾದ್ಯಂತ ಮಂಗಳವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ‌

Leave a Comment