THIRTHAHALLI | ಇಲ್ಲಿನ ಕುರುವಳ್ಳಿ – ಬಾಳೇಬೈಲು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗದಲ್ಲಿ ನಿರ್ಮಿಸಿರುವ 56 ಕೋಟಿ ರೂ. ವೆಚ್ಚದ ತುಂಗಾ ಸೇತುವೆಯ ಬೈಪಾಸ್ ರಸ್ತೆಯ ತಡೆಗೋಡೆಗಳು ಕುಸಿದು ಬಿದ್ದಿದೆ.

56 ಕೋಟಿ ರೂ. ವೆಚ್ಚದಲ್ಲಿ ಹೊಸ ತುಂಗಾ ಸೇತುವೆ ಹಾಗೂ ಬೈಪಾಸ್ ರಸ್ತೆ ನಿರ್ಮಿಸಲಾಗಿತ್ತು. ಉದ್ಘಾಟನೆಗೊಂಡು ಕೆಲವೇ ತಿಂಗಳ ಒಳಗಾಗಿ ತಡೆಗೋಡೆ ಬಿದ್ದು ಗುಡ್ಡ ಕುಸಿಯುತ್ತಿದೆ. ಈಗಾಗಲೇ ವಾಹನ ಓಡಾಟವನ್ನು ನಿರ್ಬಂಧಿಸಲಾಗಿದ್ದು ಸ್ಥಳದಲ್ಲಿ ಡಿವೈಎಸ್ಪಿ ಗಜಾನನ ವಾಮನ ಸುತಾರ ಹಾಗೂ ಪೊಲೀಸ್ ಸಿಬ್ಬಂದಿಗಳು ಮೊಕ್ಕಂ ಹೂಡಿದ್ದಾರೆ.

ಮಲೆನಾಡಿನಾದ್ಯಂತ ಭಾರಿ ಮಳೆಯಾಗುತ್ತಿದ್ದು ಸೋಮವಾರ ಸಂಜೆ ವೇಳೆ ಕುಸಿಯುವ ಹಂತಕ್ಕೆ ತಲುಪಿದ್ದ ತಡೆಗೋಡೆಗಳು ಮಂಗಳವಾರ ಸಂಜೆಯಾಗುವಷ್ಟರಲ್ಲಿ ಕುಸಿದು ಬಿದ್ದಿದೆ. ಒಂದೇ ಮಳೆಗೆ 56 ಕೋಟಿ ರೂ. ವೆಚ್ಚದ ಸೇತುವೆ ಹಾಗೂ ತಡೆಗೋಡೆಯ ಕಾಮಗಾರಿ ಈ ಪರಿಸ್ಥಿತಿಗೆ ಬಂದಿರುವುದು ಅವೈಜ್ಞಾನಿಕ ಕಾಮಗಾರಿ ಎಂಬ ಮಾತುಗಳು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.