ಕಾಣೆಯಾಗಿದ್ದ ಯುವತಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ !

Written by malnadtimes.com

Published on:

THIRTHAHALLI | ಕಾಣೆಯಾಗಿದ್ದ (Missing) ಯುವತಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ನಾಲೂರು-ಕೊಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಮನೆ ಗ್ರಾಮದ ಕಾಡಿನಲ್ಲಿ ಶನಿವಾರ ರಾತ್ರಿ ಪತ್ತೆಯಾಗಿದೆ.

WhatsApp Group Join Now
Telegram Group Join Now
Instagram Group Join Now

ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯ ಕುಶಾಲ್ ಎಂಬುವವರ ಪುತ್ರಿ ಪೂಜಾ ಎ.ಕೆ (24) ಜೂನ್ 30ರಂದು ಮನೆಯಿಂದ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ಕೆಲಸಕ್ಕೆಂದು ಹೊರಗೆ ಹೋದವರು ವಾಪಾಸ್ಸಾಗಿರುವುದಿಲ್ಲವೆಂದು ಆಗುಂಬೆ ಠಾಣೆಯಲ್ಲಿ ಪೋಷಕರು ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದರು‌‌.

ಕ್ಷೇತ್ರದ ಸಮಸ್ಯೆಗಳತ್ತ ಗಮನಹರಿಸಿ ಅಭಿವೃದ್ಧಿಗೆ ಆದ್ಯತೆ ನೀಡುವೆ : ಸಂಸದ ಬಿ.ವೈ. ರಾಘವೇಂದ್ರ

ನಾಲೂರಿನ ಮಣಿ ಎಂಬಾತ ಕೊಲೆ ಮಾಡಿ ಹೊಂಡಕ್ಕೆ ತಳ್ಳಿದ್ದೇನೆ ಎಂದು ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾನೆಂದು ಮೂಲಗಳ ಪ್ರಕಾರ ತಿಳಿದು ಬಂದಿದೆ. ಶನಿವಾರ ರಾತ್ರಿ ಆತನನ್ನು ಸ್ಥಳಕ್ಕೆ ಕರೆದೊಯ್ದು ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ. ಆದರೆ ಮೃತಳಿಗೂ ಹಾಗೂ ಕೊಲೆಗಾರನಿಗೂ ಇರುವ ಸಂಬಂಧವೇನೆಂಬುದು ಇನ್ನಷ್ಟೇ ತಿಳಿದುಬರಬೇಕಿದೆ.

Leave a Comment