THIRTHAHALLI | ನಿನ್ನೆ ತಾಲೂಕಿನಲ್ಲಿ ಸುರಿದ ಭಾರಿ ಮಳೆಗೆ ನದಿಗಳು, ಹಳ್ಳ-ಕೊಳ್ಳಗಳು ಉಕ್ಕಿ ಹರಿದಿದ್ದು ಹಳ್ಳ ದಾಟಲು ಹೋದ ವ್ಯಕ್ತಿಯೋರ್ವ ನೀರಿನಲ್ಲಿ ಕೊಚ್ಚಿ ಹೋದ ಘಟನೆ ವರದಿಯಾಗಿದೆ.
ಮತ್ತೊಂದು ಪ್ರಶಸ್ತಿ ಮುಡಿಗೇರಿಸಿಕೊಂಡ ಹಡ್ಲುಬೈಲು ಶಾಲೆ !
ದೇವಂಗಿ ಗ್ರಾಪಂ ವ್ಯಾಪ್ತಿಯ ಉಂಟೂರು ಗ್ರಾಮದ ಕೃಷ್ಣಮೂರ್ತಿ ನಾಯ್ಕ್ (55) ಮೃತ ವ್ಯಕ್ತಿ. ಈತ ನಿನ್ನೆ ಸಂಜೆ ತನ್ನ ಮನೆ ಬಳಿ ಹಳ್ಳದಾಟುವಾಗ ಕಾಲುಜಾರಿ ಬಿದ್ದು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ರಾತ್ರಿಯಾದರೂ ಕೃಷ್ಣಮೂರ್ತಿ ಮನೆಗೆ ಬಾರದೆ ಇರುವುದರಿಂದ ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ. ಇಂದು ಬೆಳಗ್ಗೆ ಮನೆ ಬಳಿಯ ಹಳ್ಳದಲ್ಲಿ ಕೃಷ್ಣಮೂರ್ತಿ ಶವವಾಗಿ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ.
ಮೃತರು ಮಂದಾರ್ತಿ ಮೇಳದ ಯಕ್ಷಗಾನ ಕಲಾವಿದರಾದ ಪ್ರಸನ್ನರವರ ತಂದೆಯಾಗಿದ್ದು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ತೀರ್ಥಹಳ್ಳಿ ಪೊಲೀಸರಿಂದ ತನಿಖೆ ಆರಂಭಗೊಂಡಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.
School Holiday | ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ತಾಲ್ಲೂಕಿನಾದ್ಯಂತ ಬುಧವಾರ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.