Shivamogga News

ತೀರ್ಥಹಳ್ಳಿ ತಾಲೂಕಿನ ಶಾಲೆ, ಕಾಲೇಜುಗಳಿಗೆ ಶನಿವಾರ ರಜೆ ಘೋಷಣೆ

THIRTHAHALLI | ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಜು.20ರ ಶನಿವಾರ ರಜೆ ಘೋಷಿಸಿ ತಹಶೀಲ್ದಾರ್‌ ಜಕ್ಕಣ್ಣ ಗೌಡರ್ ಆದೇಶಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

HOSANAGARA :ಶನಿವಾರವೂ ಹೊಸನಗರ ತಾಲೂಕಿನಾದ್ಯಂತ ಶಾಲೆ, ಕಾಲೇಜುಗಳಿಗೆ ರಜೆ  ಘೋಷಣೆ

📢 Stay Updated! Join our WhatsApp Channel Now →

ಶನಿವಾರದಂದು ತಾಲೂಕಿನ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಪದವಿ ಕಾಲೇಜು ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಲಾಗಿದೆ.

karnataka rain
karnataka rain

ಈಗಾಗಲೇ ಹೊಸನಗರ, ಸಾಗರ, ಸೊರಬ ತಾಲ್ಲೂಕಿನ ಎಲ್ಲಾ ಶಾಲೆ, ಕಾಲೇಜುಗಳಿಗೆ ಶನಿವಾರ ರಜೆ ಘೋಷಣೆ ಮಾಡಿ ಆಯಾ ತಾಲೂಕಿನ ತಹಶೀಲ್ದಾರ್‌ ಆದೇಶಿಸಿದ್ದಾರೆ.

ಮಂಗಳವಾರದಿಂದ ಶಿವಮೊಗ್ಗ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಸತತವಾಗಿ ರಜೆ ಘೋಷಣೆ ಮಾಡಲಾಗಿದ್ದು ಜಿಲ್ಲೆಯಲ್ಲಿ ನಾಳೆಯೂ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಕಳೆದ 24 ಗಂಟೆಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ದಾಖಲಾದ ಮಳೆ ವಿವರ

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>