THIRTHAHALLI ; ತೀರ್ಥಹಳ್ಳಿ ತಹಸಿಲ್ದಾರ್ ಜಕ್ಕಣ್ಣ ಗೌಡರ್ ಇಂದು ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಮೃತ ಜಕ್ಕಣ್ಣ ಗೌಡರ್ ಅವರು ತೀರ್ಥಹಳ್ಳಿಯ ತಹಸಿಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಕಾರ್ಯನಿಮಿತ್ತ ಜಕ್ಕಣ್ಣ ಗೌಡರ್ ನ್ಯಾಯಾಲಯದ ಕೆಲಸಕ್ಕೆ ಬೆಂಗಳೂರಿಗೆ ತೆರಳಿದ್ದರು. ಬೆಂಗಳೂರಿನ ನರ್ತಕಿ ಚಿತ್ರಮಂದಿರ ಎದುರು ಇರುವ ವೈಭವ ಲಾಡ್ಜ್ ನಲ್ಲಿ ತಂಗಿದ್ದರು. ರಾತ್ರಿ 10:00 ಗಂಟೆ ಸುಮಾರಿಗೆ ತೀವ್ರ ಹೃದಯಘಾತದಿಂದ ಜಕ್ಕಣ್ಣ ಗೌಡರ್ ನಿಧನರಾಗಿದ್ದಾರೆ.

ಮೂಲತಃ ಗದಗ ಜಿಲ್ಲೆಯವರಾದ ಇವರು ಪ್ರಸ್ತುತ ತೀರ್ಥಹಳ್ಳಿ ತಹಸಿಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.