ಜಮೀನಿನಲ್ಲಿ ನೀರು ಹೋಗುವ ವಿಚಾರಕ್ಕೆ ನಡೆಯಿತು ಗಲಾಟೆ, ವಿಷ ಸೇವಿಸಿ ಆಸ್ಪತ್ರೆ ಸೇರಿದ ಸಹೋದರರು !

Written by malnadtimes.com

Published on:

THIRTHAHALLI | ಜಮೀನಿಗೆ ಹೋಗುವ ನೀರಿನ ವಿಚಾರವಾಗಿ ಸಹೋದರರಿಬ್ಬರು ವಿಷ (Poisson) ಸೇವಿಸಿ ಆತ್ಮಹತ್ಯೆಗೆ (Suicide) ಯತ್ನಿಸಿ ಆಸ್ಪತ್ರೆ ಸೇರಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಅರಳಸುರಳಿ (Aralasurali) ಗ್ರಾಪಂ ವ್ಯಾಪ್ತಿಯ ಹುಲಿಸರ (Hulisara) ಗ್ರಾಮದಲ್ಲಿ ಇಂದು ಸಂಜೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now

Adike Price 07 ಜುಲೈ 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ ?

ಏನಿದು ಘಟನೆ ?

ಕಾಲುವೆ ಮತ್ತು ಗುಡ್ಡದ ನೀರು ತಮ್ಮ ಜಮೀನಿನ ಮೂಲಕ ಹೋಗುತ್ತದೆ. ಈ ವಿಚಾರದಲ್ಲಿ ಗ್ರಾಮಸ್ಥರ ನಡುವೆ ಗಲಾಟೆ ನಡೆದು ನಂತರ ತಾಲೂಕು ಆಡಳಿತ ಸೂಕ್ತ ಕ್ರಮ ಕೈಗೊಳ್ಳಲು ಮುಂದಾದ ಸಂದರ್ಭದಲ್ಲಿ ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಹುಲಿಸರ ಗ್ರಾಮದ ಸ.ನಂ. 125 ಹಾಗೂ 126ರ ಜಾಗದ ಮಾಲೀಕರು ದಿನೇಶ್ (45) ಹಾಗೂ ಸತೀಶ್ (49) ಎಂಬುವರು ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಬ್ಬರನ್ನು ಜಯಚಾಮರಾಜೇಂದ್ರ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲ ಆಸ್ಪತ್ರೆಗೆ ಕಳುಹಿಸಲಾಗಿದೆ.

ಕಾಣೆಯಾಗಿದ್ದ ಯುವತಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ !

ವಿಷಯ ತಿಳಿಯುತ್ತಿದ್ದಂತೆ ಶಾಸಕ ಆರಗ ಜ್ಞಾನೇಂದ್ರ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಘಟನೆ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment