ತೀರ್ಥಹಳ್ಳಿ

ವಂದೇ ಮಾತರಂ ಎರಡು ಚರಣ ಹಾಡಿದ್ದಕ್ಕೆ ಆಕ್ಷೇಪ; ಸಿಎಂ ಎದುರೇ ಶಾಸಕ ಚನ್ನಬಸಪ್ಪ ಅಸಮಾಧಾನ

ತೀರ್ಥಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗೀತೆಯ ಎರಡು ಚರಣಗಳನ್ನು ಮಾತ್ರ ಹಾಡಲಾಗಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲೇ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಸಭೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.

ವಂದೇ ಮಾತರಂ ಎರಡು ಚರಣ ಹಾಡಿದ್ದಕ್ಕೆ ಆಕ್ಷೇಪ; ಸಿಎಂ ಎದುರೇ ಶಾಸಕ ಚನ್ನಬಸಪ್ಪ ಅಸಮಾಧಾನ – channi

ಶಿವಮೊಗ್ಗ: ಕಸ್ತೂರಿ ರಂಗನ್ ವರದಿ ಕುರಿತು ಮಲೆನಾಡು ಭಾಗದ ಜನರ ಅಹವಾಲು ಆಲಿಸಲು ತೀರ್ಥಹಳ್ಳಿಗೆ ಆಗಮಿಸಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲೇ, ಸರ್ಕಾರಿ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗೀತೆಯ ಎರಡು ಚರಣಗಳನ್ನು ಮಾತ್ರ ಹಾಡಲಾಗಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ತೀರ್ಥಹಳ್ಳಿಯ ಯು.ಆರ್. ಅನಂತಮೂರ್ತಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಂವಾದ ಹಾಗೂ ಸಭಾ ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದೆ.

ವೇದಿಕೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ. ರಾಘವೇಂದ್ರ ಸೇರಿದಂತೆ ಹಲವು ಜನಪ್ರತಿನಿಧಿಗಳು ಉಪಸ್ಥಿತರಿದ್ದ ವೇಳೆ ಶಾಸಕ ಚನ್ನಬಸಪ್ಪ ತಮ್ಮ ಆಕ್ಷೇಪ ವ್ಯಕ್ತಪಡಿಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಈ ಸಂದರ್ಭದಲ್ಲಿ ಸಭೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳು ಮತ್ತು ಮುಖಂಡರು ಚನ್ನಬಸಪ್ಪ ಅವರನ್ನು ಸಮಾಧಾನಪಡಿಸಲು ಮುಂದಾದರು. ಇದೇ ವೇಳೆ ಸಭೆಯಲ್ಲಿದ್ದ ಕೆಲವರು ಎದ್ದು ನಿಂತು ಮುಖ್ಯಮಂತ್ರಿ ಪರ ಘೋಷಣೆಗಳನ್ನು ಕೂಗಿದರು.

ಸರ್ಕಾರಿ ಕಾರ್ಯಕ್ರಮದಲ್ಲಿ ಸಚಿವರಾದ ರಾಮಲಿಂಗಾ ರೆಡ್ಡಿ, ಮಧು ಬಂಗಾರಪ್ಪ, ಆರ್.ಎಂ. ಮಂಜುನಾಥ್ ಗೌಡ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650