ಹೊಸನಗರ ; ತರಬೇತಿ ವೇಳೆ ನಡೆದ ಅವಘಡದಲ್ಲಿ ಭಾರತೀಯ ವಾಯುಪಡೆಯ ವೀರ ಯೋಧ ಅಧಿಕಾರಿ ಮಂಜುನಾಥ್ (36) ಮೃತದೇಹ ಹೊಸನಗರಕ್ಕೆ ಭಾನುವಾರ ಬೆಳಗ್ಗೆ 11.15ಕ್ಕೆ ಆಗಮಿಸಿದ್ದು ಹೊಸನಗರದ ಮಾವಿನಕೊಪ್ಪ ಕೊಡಚಾದ್ರಿ ಕಾಲೇಜ್ ಸಮೀಪ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಹಾಗೂ ಸಾಗರ ಹೊಸನಗರದ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ, ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್ ಕಾರ್ಯನಿರ್ವಹಣಾಧಿಕಾರಿ ನರೇಂದ್ರಕುಮಾರ್, ಕ್ಷೇತ್ರ ಶಿಕ್ಷನಾಧಿಕಾರಿ ಹೆಚ್.ಆರ್. ಕೃಷ್ಣಮೂರ್ತಿ ಹಾಗೂ ತಾಲ್ಲೂಕಿನ ಎಲ್ಲ ಸರ್ಕಾರಿ ಅಧಿಕಾರಿಗಳು ಮೃತ ದೇಹಕ್ಕೆ ಸರ್ಕಾರಿ ಗೌರವ ಸಲ್ಲಿಸುವ ಮೂಲಕ ಭರ ಮಾಡಿಕೊಳ್ಳುವುದರ ಜೊತೆಗೆ ಹೊಸನಗರದ ಪ್ರಮುಖ ಬೀದಿಗಳಲ್ಲಿ ಶಾಲಾ ಮಕ್ಕಳು ಮತ್ತು ದೇಶ ಭಕ್ತಾರು ಪುಷ್ಪ ನಮನ ಅರ್ಪಿಸುವ ಮೂಲಕ ಅಂತಿಮ ಯಾತ್ರೆ ನಡೆಸಲಾಗಿದ್ದು ಸಾವಿರಾರು ಜನ ಅಂತಿಮ ದರ್ಶನ ಪಡೆದು ಮಂಜುನಾಥ್ ಹುಟ್ಟೂರು ಸಂಕೂರಿನವರೆಗೆ ಮೆರವಣಿಗೆಯಲ್ಲಿ ಭಾಗವಹಿಸಿದರು.

ದೆಹಲಿ ಸಮೀಪದ ಆಗ್ರಾದಲ್ಲಿ ನಡೆಯುತ್ತಿದ್ದ ತರಬೇತಿ ಶಿಬಿರದಲ್ಲಿ ಶುಕ್ರವಾರ ಬೆಳಿಗ್ಗೆ ಜೂನಿಯರ್ ವಾರೆಂಟ್ ಆಫೀಸರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಮಂಜುನಾಥ್ ವಿಮಾನದಿಂದ ಜಿಗಿಯುವ ವೇಳೆ ಪ್ಯಾರಾಚೂಟ್ ತೆರೆದುಕೊಳ್ಳದೆ ಕೆಳಕ್ಕೆ ಬಿದ್ದು ಮೃತಪಟ್ಟಿದ್ದರು.

ಮೃತದೇಹ ದೆಹಲಿಯಿಂದ ರವಾನೆಯಾಗಿದ್ದು ಶಿವಮೊಗ್ಗದಿಂದ ರಿಪ್ಪನ್‌ಪೇಟೆ ಮಾರ್ಗವಾಗಿ ಹೊಸನಗರಕ್ಕೆ 11.15ಕ್ಕೆ ಆಗಮಿಸಿದ್ದು ಹೊಸನಗರದ ಮೂಲಕ ಹುಟ್ಟೂರಿಗೆ 12.15ಕ್ಕೆ ತಲುಪಿದೆ ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತಿಮಯಾತ್ರೆ ನಡೆಸಲಾಗಿದ್ದು ಹೊಸನಗರ ತಾಲ್ಲೂಕಿನ ಎಲ್ಲ ಪಕ್ಷದ ರಾಜಕೀಯ ನಾಯಕರು ಕಾರ್ಯಕರ್ತರು ವಿವಿಧ ಸಂಘದ ಅಧ್ಯಕ್ಷರು, ಸದಸ್ಯರು ಹಾಗೂ ಮಹಿಳೆಯರು ಭಾಗವಹಿಸಿ ಸುಮಾರು 12 ಕಿ.ಮಿ ವರೆಗೆ ಕಾಲ್ನಡಿಗೆಯಲ್ಲಿ ಯೋಧನ ಪಾರ್ಥಿವ ಶರೀರದ ಮೆರವಣಿಗೆಯ ಮೂಲಕ ಹುಟ್ಟುರಿನವರೆಗೆ ಸಾಗಿಸಲಾಯಿತು. ನಂತರ ಸುಮಾರು 3 ಗಂಟೆಯ ಸಮಯದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.

ಪೊಲೀಸ್ ಇಲಾಖೆಯ ಕಾರ್ಯವೈಖರಿಗೆ ಶ್ಲಾಘನೆ:
ಭಾನುವಾರ ಬೆಳಿಗ್ಗೆ ಸುಮಾರು 6 ಗಂಟೆಯಿಂದ ಹೊಸನಗರ ತಾಲ್ಲೂಕಿನ ಎಲ್ಲ ಪೋಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರ ನೇತೃತ್ವದ ತಂಡ ಸಾವಿರಾರು ಸಾರ್ವಜನಿಕರು, ದೇಶ ಭಕ್ತರು ಮೆರವಣಿಗೆಯಲ್ಲಿ ಭಾಗವಹಿಸಿದರೂ ಯಾವುದೇ ಓಡಾಡುವ ವಾಹನಗಳಿಗೆ ತೊಂದರೆಯಾಗದಂತೆ ಹಾಗೂ ಪ್ರತಿಯೊಬ್ಬರು ಮೆರವಣಿಗೆಯಲ್ಲಿ ಭಾಗವಹಿಸಲು ಅನುವು ಮಾಡಿಕೊಟ್ಟಿದ್ದು ಇದರ ಜೊತೆಗೆ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಸಾವಿರಾರು ಜನರು ಭಾಗವಹಿಸಿದ್ದು ಎಲ್ಲಿಯೂ ಯಾವುದೇ ರೀತಿಯಲ್ಲಿಯೋ ಅವಘಡ ಸಂಭವಿಸದಂತೆ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಿದ್ದು ಇವರಿಗೆ ಮೃತರ ಕುಟುಂಬಸ್ಥರು ಹಾಗೂ ಹೊಸನಗರದ ಜನತೆ ಮೆಚ್ಚಿಗೆ ವ್ಯಕ್ತಪಡಿಸಿದ್ದಾರೆ.


ವಿಡಿಯೋ ವೀಕ್ಷಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ. https://www.facebook.com/share/v/199wsQH85B/