ರಿಪ್ಪನ್‌ಪೇಟೆ : ಅಕ್ರಮವಾಗಿ ಗೋವುಗಳನ್ನು ತುಂಬಿಕೊೃಡು ಸಾಗಾಣಿಕೆ ಮಾಡುತ್ತಿದ್ದಾರೆಂಬ ಮಾಹಿತಿಯನ್ನಾದರಿಸಿ ಗ್ರಾಮಸ್ಥರ ಸಹಯೋಗದಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ನೇತೃತ್ವದ ಸಿಬ್ಬಂದಿವರ್ಗ ದಿಢೀರ್ ದಾಳಿ ನಡೆಸಿ ಜಾನುವಾರು ಸಹಿತ ಆರೋಪಿಗಳನ್ನು ಬಂಧಿಸಿದ್ದಾರೆ.
ಅಕ್ರಮ ಗೋ ಸಾಗಾಣಿಕೆಯಲ್ಲಿ ತೊಡಗಿದ್ದ ನಲ್ಲಿಹೊಂಡಾ ಗ್ರಾಮದ ಅರಣ್ಯ ಇಲಾಖೆಯ ವಾಚರ್ ತಾಲ್ಲೂಕು ದಿನಗೂಲಿ ನೌಕರ ಸಂಘದ ಅಧ್ಯಕ್ಷ ರಮೇಶ ಹಾಗೂ ಶಿಕಾರಿಪುರ ಬೆಂಡೆಕಟ್ಟ ಗ್ರಾಮದ ಹರೀಶ ಪುನೀತ್ ಎಂಬ ಆರೋಪಿಗಳನ್ನು ಬಂಧಿಸುವ ಮೂಲಕ ಮೂರು ಮಲೆನಾಡು ಗಿಡ್ಡಗಳನ್ನು ಸಾಗಾಣಿಕೆಗೆ ಬಳಸಲಾದ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಅಕ್ರಮವಾಗಿ ಗೋವುಗಳನ್ನು ತುಂಬಿಕೊಂಡು ಸಾಗಾಣಿಕೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯನ್ನ ಅರಿತ ಹರತಾಳು ಗೋಪಾಲಕೃಷ್ಣ, ಅಭಿಶೆಟ್ಟಿ, ಶರತ್, ಸುರೇಶ್, ನಾಗೇಶ, ನಾಗರಾಜ್, ಚಂದ್ರು, ಚಂದ್ರಶೇಖರ್, ಕಿರಣ್, ಇನ್ನಿತರರು ಪೊಲೀಸ್ ಇಲಾಖೆಗೆ ಸಹಕರಿಸಿದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.