CHIKKAMAGALURU ; ರಾಜ್ಯದ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಕುರಿತು ಚರ್ಚೆ ನಡೆಯುತ್ತಿರುವ ವೇಳೆಯೇ ಮೂರು ದಿನದ ಬಾಣಂತಿಯೊಬ್ಬರು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಸಂಬಂಧಿಕರು ಆರೋಪ ಮಾಡಿದ್ದಾರೆ.
ಚಿಕ್ಕಮಗಳೂರು ನಗರದ ಶಂಕರಪುರ ನಿವಾಸಿ ಸವಿತಾ (26) ಮೃತ ದುರ್ದೈವಿ. ಸವಿತಾ ಕಳೆದ ಮೂರು ದಿನಗಳ ಹಿಂದೆ ಜಿಲ್ಲಾಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಎರಡು ದಿನದ ಬಳಿಕ ಬಾಣಂತಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಸೌಲಭ್ಯವಿಲ್ಲವೆಂದು ವೈದ್ಯರು ಹೇಳಿದ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಬಾಣಂತಿ ಸಾವಿಗೀಡಾಗಿದ್ದಾರೆ.
ಬಾಣಂತಿ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಸಿಜರಿನ್ ಮಾಡುವ ವೇಳೆ ವೈದ್ಯರು ಬಿ.ಪಿ., ಶುಗರ್ ಪರೀಕ್ಷೆ ಮಾಡಿಲ್ಲವೆಂದು ಸರ್ಕಾರಿ ಆಸ್ಪತ್ರೆ ವೈದ್ಯರ ಮೇಲೆ ಕುಟುಂಬಸ್ಥರು ಆರೋಪ ಮಾಡಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.