ಹೊಸನಗರ ; ಅಕ್ರಮವಾಗಿ ಶ್ರೀಗಂಧ ಮರಗಳನ್ನು ಕಡಿದು ಬೈಕ್‌ನಲ್ಲಿ ಸಾಗಾಣಿಕೆ ಮಾಡುತ್ತಿದ್ದ ಮೂವರು ಶ್ರೀಗಂಧ ಚೋರರನ್ನು ಅರಣ್ಯಾಧಿಕಾರಿಗಳು ಬಂಧಿಸಿರುವ ಘಟನೆ ತಾಲೂಕಿನ ಹರಿದ್ರಾವತಿ ಮೀಸಲು ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಹರಿದ್ರಾವತಿ ಮೀಸಲು ಅರಣ್ಯದಲ್ಲಿ ಶ್ರೀಗಂಧ ಮರಗಳನ್ನು ಕಡಿದು ಕಳ್ಳ ಸಾಗಾಣಿಕೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಶ್ರೀನಾಥ್ (27), ನವೀನ್ (25) ಹಾಗೂ ಕೀರ್ತನ್ (25) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಅಂದಾಜು 28 ಕೆ.ಜಿ. ತೂಕದ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಸಂಚಾರಿ ದಳದ ಪಿಎಸ್‌ಐ ವಿನಾಯಕ, ಹೊಸನಗರ ವಲಯ ಅರಣ್ಯಾಧಿಕಾರಿ ಅನಿಲ್ ಕುಮಾರ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಭಾಗವಹಿಸಿದ್ದರು.

