ಹೊಸನಗರ

ರಿಪ್ಪನ್‌ಪೇಟೆಯಲ್ಲಿ ತಿರಂಗಾ ಯಾತ್ರೆ : ದೇಶ ವಿಭಜನೆಯ ಕರಾಳ ದಿನವನ್ನು ಸ್ಮರಿಸಿದ ಬಿಜೆಪಿ

InShot 20260815 200753424

ರಿಪ್ಪನ್‌ಪೇಟೆ : ಆಗಸ್ಟ್ 15 ರಂದು ಎಲ್ಲರೂ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿ ದೇಶದ ಏಕತೆಗೆ ಕೈಜೋಡಿಸಬೇಕು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದ ಮತ್ತು ದೇಶಭಕ್ತಿಯನ್ನು ಸ್ಮರಿಸಬೇಕೆಂದು ಬಿಜೆಪಿ ಜಿಲ್ಲಾ ಮುಖಂಡ ಹರಿಕೃಷ್ಣ ಹೇಳಿದರು.

WhatsApp Group Join Now
Telegram Group Join Now
Instagram Group Join Now

80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬಿಜೆಪಿ ಆಯೋಜಿಸಲಾದ ಹರ್ ಘರ್ ತಿರಂಗ್ ಯಾತ್ರೆಯ ಅಭಿಯಾನದ ಅಂಗವಾಗಿ ಇಲ್ಲಿನ ಬಿಜೆಪಿ ಕಾರ್ಯಕರ್ತರು ಕೈಯಲ್ಲಿ ರಾಷ್ಟ್ರಧ್ವಜವನ್ನು ಹಿಡಿದು ಮೌನ ಮೆರವಣಿಗೆ ನಡೆಸಿ ಬಳಿಕ ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಜಿಲ್ಲಾ ಮುಖಂಡ ಹರಿಕೃಷ್ಣ ಮಾತನಾಡಿ, ಅಖಂಡ ಭಾರತದ ವಿಭಜನೆಯ ಸಂದರ್ಭದಲ್ಲಿ ನಡೆದ ದುರಂತ ಹಾಗೂ ಅನ್ಯಾಯಗಳನ್ನು ಸ್ಮರಿಸುವ‌ ಹಿಂದುಗಳ ಮೇಲೆ ನಡೆದ ಮಾರಣಹೋಮ, ಹಿಂಸಾಚಾರ ಹಾಗೂ ಅನ್ಯಾಯದ ಘಟನೆಗಳನ್ನು ಮೆಲುಕು ಹಾಕಿದರು.

ವಿಭಜನೆಯ ಕರಾಳ ಇತಿಹಾಸವನ್ನು ಮುಂದಿನ ಯುವಪೀಳಿಗೆ ಮರೆಯಬಾರದು. ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸುವ ಪ್ರತಿಯೊಬ್ಬರೂ ದೇಶಾಭಿಮಾನ ಮೂಡಿಸುವ ಉದ್ದೇಶ ಇದರಲ್ಲಿ ಇದೆ. ಸ್ವಾತಂತ್ರ್ಯದ ಹಿಂದೆ ಲಕ್ಷಾಂತರ ದೇಶಭಕ್ತರ ಯೋಧರ ತ್ಯಾಗ ಬಲಿದಾನವಿದೆ. ಯುವ ಪೀಳಿಗೆ ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರು ಹೋಗದೆ ನಮ್ಮ ಇತಿಹಾಸವನ್ನು ಸ್ಮರಿಸಬೇಕಾಗಿದೆ. ಇಂತಹ ತಿರಂಗಾ ಯಾತ್ರೆ ಸಮಾಜದಲ್ಲಿ ಸೌಹಾರ್ದತೆ ಮತ್ತು ಏಕತೆಯನ್ನು ಮೂಡಿಸುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹಾಜರಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!