ಹೊಸನಗರ ; ಅಬ್ಬಿ ಫಾಲ್ಸ್‌ನಲ್ಲಿ ಪ್ರವಾಸಿಗ ನೀರುಪಾಲು !

Written by Mahesha Hindlemane

Published on:

ಹೊಸನಗರ ; ಕಾಲುಜಾರಿ ಪ್ರವಾಸಕ್ಕೆ ಬಂದಿದ್ದ ಯುವಕ ನೀರುಪಾಲಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಫಾಲ್ಸ್ ನಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಬೆಂಗಳೂರಿನ ನಾಗರಬಾವಿಯ ಖಾಸಗಿ ಕಂಪನಿಯೊಂದರ ಮ್ಯಾನೇಜರ್ ಆಗಿದ್ದ ರಮೇಶ್ ಎಂಬಾತ ನೀರುಪಾಲಾದ ಪ್ರವಾಸಿಗ. ಯಡೂರಿನ ಅಬ್ಬಿ ಜಲಪಾತದಲ್ಲಿ ನೀರಿಗೆ ಇಳಿದಿದ್ದ ರಮೇಶ್‌ ಕಾಲು ಜಾರಿ ಬಿದ್ದಿದ್ದಾರೆ. ಈ ವೇಳೆ ವಿಡಿಯೋಗೆ ಪೋಸ್ ನೀಡುತ್ತಿದ್ದ ಯುವಕ ಏಕಾಏಕಿ ಕಾಲು ಜಾರಿ ನೀರು ಪಾಲಾಗಿದ್ದಾನೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವೂ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಈ ಘಟನೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Leave a Comment