SHIVAMOGGA ; ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರ ಕಾರೊಂದು ಪಲ್ಟಿಯಾಗಿ ಬೆಂಗಳೂರು ಮೂಲದ ಯುವಕ ಸಾನ್ನಪ್ಪಿದ ಘಟನೆ ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಕೆರೆಕೋಡಿ ಬಳಿ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶಿವಗಂಗೆಬೆಟ್ಟದ ನಿವಾಸಿ ಚಂದನ್ (26) ಮೃತ ಯುವಕ. ಚಾಲಕನ ನಿಯಂತ್ರಣ ತಪ್ಪಿ ಭತ್ತದ ಗದ್ದೆಗೆ ಕಾರು ಪಲ್ಟಿಯಾಗಿದ್ದು ಮಡಿಕೇರಿ ಮೂಲದ ನಂದನ್ (22), ಕೋಲಾರ ಮೂಲದ ಕೋದಂಡ(18), ಮಂಡ್ಯ ಮೂಲದ ಯೋಗೇಶ್ (24) ಹಾಗೂ ಹಾಸನ ಮೂಲದ ಭರತ್(20) ಗಾಯಗೊಂಡ ಯುವಕರು.
ಬೆಂಗಳೂರಿನ ಯಲಹಂಕದಲ್ಲಿರುವ ಅಮೃತಹಳ್ಳಿ ವಿಬಿಎಸ್ ಅಯ್ಯಂಗಾರ್ ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದ 5 ಜನ ಯುವಕರು ಇಂದು ಬೇಕರಿಗೆ ರಜೆ ಇದ್ದ ಕಾರಣ ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ತೆರಳಲು ನಿರ್ಧರಿಸಿದ್ದರು. ಅದರಂತೆ ನಿನ್ನೆ ರಾತ್ರಿ ವೇಳೆಗೆ ಬೆಂಗಳೂರಿನಿಂದ ಹೊರಟ್ಟಿದ್ದರು. ಇಂದು ಬೆಳಿಗ್ಗೆ ಶಿವಮೊಗ್ಗದಿಂದ ಸಾಗರ ಮಾರ್ಗವಾಗಿ ಕುಂಸಿಯ ಕೆರೆಕೋಡಿ ಬಳಿ ತೆರಳುತ್ತಿದ್ದ ವೇಳೆ ಕಾರು ಪಲ್ಟಿಯಾಗಿ ಭತ್ತದ ಗದ್ದೆಗೆ ಬಿದ್ದಿದೆ. ಕಾರು ಚಾಲನೆ ಮಾಡುತ್ತಿದ್ದ ಚಂದನ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಕಾರಿನಲ್ಲಿದ್ದ ಇತರ ಯುವಕರು ಸಹ ಗಾಯಗೊಂಡಿದ್ದು, ಸ್ಥಳೀಯರು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನಾ ಸ್ಥಳಕ್ಕೆ ಕುಂಸಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.