ಹೊಸನಗರ

ಕಾಪು ಬೀಚ್‌ನಲ್ಲಿ ದುರಂತ: ಅಲೆಗಳ ಅಬ್ಬರಕ್ಕೆ ಸಿಲುಕಿ ಹೊಸನಗರ ಯುವಕ ಸೇರಿ ಇಬ್ಬರು ಯುವಕರು ನೀರುಪಾಲು

ಉಡುಪಿಯ ಕಾಪು ಬೀಚ್‌ನಲ್ಲಿ ಭಾನುವಾರ ಸಂಜೆ ಸಮುದ್ರದಲ್ಲಿ ಆಟವಾಡುತ್ತಿದ್ದ ಇಬ್ಬರು ಯುವಕರು ರಭಸದ ಅಲೆಗಳಿಗೆ ಸಿಲುಕಿ ನೀರುಪಾಲಾಗಿದ್ದಾರೆ.

Kapu Beech Incident

ಉಡುಪಿ/ಹೊಸನಗರ: ಉಡುಪಿಯ ಕಾಪು ಬೀಚ್‌ನಲ್ಲಿ ಭಾನುವಾರ ಸಂಜೆ ಸಮುದ್ರದಲ್ಲಿ ಆಟವಾಡುತ್ತಿದ್ದ ಇಬ್ಬರು ಯುವಕರು ರಭಸದ ಅಲೆಗಳಿಗೆ ಸಿಲುಕಿ ನೀರುಪಾಲಾಗಿದ್ದಾರೆ.

WhatsApp Group Join Now
Telegram Group Join Now
Instagram Group Join Now

ನಾಪತ್ತೆಯಾದವರನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾವಿನಕೊಪ್ಪ ನಿವಾಸಿ ಸಮೀರ್ (20) ಮತ್ತು ದಾವಣಗೆರೆ ಜಿಲ್ಲೆಯ ಅಹಮ್ಮದಿ ನಗರದ ನಿವಾಸಿ ಮಲ್ಲಿಕ್ ರಿಹಾನ್ (15) ಎಂದು ಗುರುತಿಸಲಾಗಿದೆ.

ಘಟನೆಯ ವಿವರ:

ಉಡುಪಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಯುವಕನನ್ನು ಭೇಟಿಯಾಗಲು ದಾವಣಗೆರೆ ಮೂಲದ ಕುಟುಂಬವು ಪ್ರವಾಸಕ್ಕೆಂದು ಉಡುಪಿಗೆ ಬಂದಿತ್ತು. ಭಾನುವಾರ ಸಂಜೆ ಕುಟುಂಬದ ಸದಸ್ಯರೆಲ್ಲರೂ ಕಾಪು ಬೀಚ್‌ಗೆ ತೆರಳಿದ್ದರು. ಈ ವೇಳೆ ಐವರು ಯುವಕರು ನೀರಿಗಿಳಿದು ಆಟವಾಡುತ್ತಿದ್ದಾಗ ಬೃಹತ್ ಅಲೆಗಳ ಹೊಡೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ.

ತಕ್ಷಣ ಕಾರ್ಯಪ್ರವೃತ್ತರಾದ ಸ್ಥಳೀಯರು ಮತ್ತು ರಕ್ಷಣಾ ಸಿಬ್ಬಂದಿ ಮೂವರನ್ನು ಸುರಕ್ಷಿತವಾಗಿ ದಡಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಸಮೀರ್ ಮತ್ತು ಮಲ್ಲಿಕ್ ರಿಹಾನ್ ನೀರಿನಲ್ಲಿ ನಾಪತ್ತೆಯಾಗಿದ್ದಾರೆ. ರಕ್ಷಿಸಲ್ಪಟ್ಟವರಲ್ಲಿ ಇಬ್ಬರು ತೀವ್ರವಾಗಿ ಅಸ್ವಸ್ಥಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮುಂದುವರಿದ ಶೋಧ ಕಾರ್ಯಾಚರಣೆ:

ನಾಪತ್ತೆಯಾದ ಯುವಕರಿಗಾಗಿ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರ ತಂಡ ಹಾಗೂ ಬೀಚ್ ರಕ್ಷಣಾ ಪಡೆ (ಲೈಫ್ ಗಾರ್ಡ್ಸ್) ಕಡಲತೀರದಲ್ಲಿ ತೀವ್ರ ಶೋಧ ನಡೆಸುತ್ತಿದ್ದು, ಇದುವರೆಗೂ ಯಾವುದೇ ಸುಳಿವು ಪತ್ತೆಯಾಗಿಲ್ಲ. ಸ್ಥಳಕ್ಕೆ ಕಾಪು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]