ಶಿವಮೊಗ್ಗ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನ ವಿಶೇಷ ವೃತ್ತಿಪರ ತರಬೇತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಐಐಎಸ್ಸಿ, ಐಐಟಿ ಹಾಗೂ ಎನ್‌ಐಟಿ ನಿಷ್ಠಿತ ಸಂಸ್ಥೆಗಳ ಸಹಯೋಗದಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (AI) ಮತ್ತು ಮಿಷಿನ್ ಲರ್ನಿಂಗ್ (ML) ಕೋರ್ಸ್‌ಗಳಲ್ಲಿ ತರಬೇತಿ ನೀಡಲಾಗುತ್ತಿದ್ದು, 200 ಪರಿಶಿಷ್ಟ ಪಂಗಡದ ಇಂಜಿನಿಯರಿಂಗ್ ಪದವೀಧರರಿಗೆ ಅವಕಾಶ ಕಲ್ಪಿಸಲಾಗಿದೆ.
Read More :ಎಲ್‌ಪಿಜಿ ಸಿಲಿಂಡರ್ ಇದಿಯೇ? ಈ ಒಂದು ತಪ್ಪು ಮಾಡಿದರೆ ಸರಕಾರದ ಸಬ್ಸಿಡಿ, ಸೌಲಭ್ಯಗಳೆಲ್ಲಾ ಕಳೆದುಕೊಳ್ತಿರ!
ಅರ್ಹ ಅಭ್ಯರ್ಥಿಗಳಿಗೆ ತಿಂಗಳಿಗೆ ₹15,000ರಷ್ಟು ಶಿಷ್ಯವೇತನವನ್ನು ಸಹ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ತಮ್ಮ ತಾಲೂಕು ಮಟ್ಟದ ಸಹಾಯಕ ನಿರ್ದೇಶಕರ ಕಚೇರಿಯಿಂದ ಅಥವಾ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿಯಿಂದ ಅರ್ಜಿ ಪಡಸಿ, ಭರ್ತಿ ಮಾಡಿದ ಅರ್ಜಿಯನ್ನು ಜುಲೈ 4, 2025ರೊಳಗಾಗಿ ಸಲ್ಲಿಸಬೇಕಾಗಿದೆ.
ಹೆಚ್ಚಿನ ಮಾಹಿತಿಗೆ, ಅಭ್ಯರ್ಥಿಗಳು 08182-200266 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ. ಸ್ಥಳೀಯ ಸಮಾಜ ಕಲ್ಯಾಣ ಇಲಾಖೆ ಕಚೇರಿಗೂ ಭೇಟಿ ನೀಡಬಹುದು.
Read More : ಜುಲೈ 1: ಭಾರತದಲ್ಲಿ ಜಾರಿಗೆ ಬರುವ ಹೊಸ ನಿಯಮಗಳು – ನೀವು ತಿಳಿಯಲೇಬೇಕಾದ ಮಾಹಿತಿ
MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.