SORABA | ಕಾಡು ಹಂದಿ ಹಿಡಿಯಲು ಹಾಕಿದ್ದ ಉರುಳಿಗೆ ಸಿಲುಕಿ ಚಿರತೆಯೊಂದು (Leopard) ಮೃತಪಟ್ಟ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಸೊರಬ ತಾಲೂಕಿನ ಹೊಸಬಾಳೆ ವೃತ್ತದ ಮೇಲಿನ ಕಿರುಗುಣಸೆ ಗ್ರಾಮದಲ್ಲಿ ಬುಧವಾರ ನಡೆದಿದೆ.
ಗ್ರಾಮಸ್ಥರೊಬ್ಬರು ಚಿರತೆ ಉರುಳಿಗೆ ಸಿಲುಕಿ ಕೂಗುವುದನ್ನು ಕಂಡು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಶಿವಮೊಗ್ಗದಿಂದ ಅರವಳಿಕೆ ತಜ್ಞರು ಆಗಮಿಸಿ ಗಾಯಗೊಂಡಿದ್ದ ಚಿರತೆಗೆ ಚಿಕಿತ್ಸೆ ನೀಡುವಷ್ಟರಲ್ಲಿ ಚಿರತೆ ಮೃತಪಟ್ಟಿದೆ.
ಜಮೀನಿನೊಂದರ ತಂತಿ ಬೇಲಿಗೆ ಹಂದಿ ಹಿಡಿಯಲು ಅಳವಡಿಸಿದ್ದ ಉರುಳಿಗೆ ಸಿಲುಕಿ ಸುಮಾರು 4 ವರ್ಷದ ಗಂಡು ಚಿರತೆ ಮೃತಪಟ್ಟಿದ್ದು, ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ಎಲ್. ಪರಶುರಾಮ್, ಉಪವಲಯ ಅರಣಯಾಧಿಕಾರಿಗಳಾದ ಜಿ. ಪರಶುರಾಮ್, ರಾಮಪ್ಪ, ಗಸ್ತು ಅರಣ್ಯಪಾಲಕರಾದ ಹರೀಶ್, ಆನಂದ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂಬಂಧ ಜಮೀನಿನ ಮಾಲಿಕ ರಾಜು ಸಿ. ಕಳತ್ತೂರು ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಮೃತ ಚಿರತೆಯನ್ನು ಮರಣೋತ್ತರ ಪರೀಕ್ಷೆ ನಡೆಸಿ, ಅಂತ್ಯಕ್ರಿಯೆ ನಡೆಸಲಾಯಿತು.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.