Ripponpete

ಸುಂಟರಗಾಳಿಗೆ ಧರೆಗುರುಳಿದ ಮರಗಳು, ಹಾರಿಹೋದ ಮನೆಗಳ ಮೇಲ್ಛಾವಣಿ ; ಅಪಾರ ನಷ್ಟ

ರಿಪ್ಪನ್‌ಪೇಟೆ ; ಏಕಾಏಕಿ ಬಂದ ಭಾರಿ ಪ್ರಮಾಣದ ಸುಂಟರಗಾಳಿಗೆ ವಿದ್ಯುತ್ ಕಂಬ, ಮರಗಳು ಧರೆಗುರುಳಿದ್ದು ಹಲವು ಮನೆಗಳ ಮೇಲ್ಛಾವಣಿ ಹಾರಿಹೋಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ಇಲ್ಲಿನ ಗವಟೂರು ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಈ ಘಟನೆಯಲ್ಲಿ ಶಾಲೆಯ ಕಾಂಪೌಂಡ್, ವಿದ್ಯುತ್ ಕಂಬಗಳು ಹಾಗೂ ಮರಗಳು, ತೆಂಗಿನಮರ ಧರಾಶಾಹಿಯಾಗಿದ್ದು, ಅನೇಕ ಮನೆಗಳ ಹೆಂಚುಗಳು, ಶೀಟುಗಳು ಗಾಳಿಯ ಆರ್ಭಟಕ್ಕೆ ಹಾರಿಹೋಗಿ ಅಪಾರ ನಷ್ಟ ಸಂಭವಿಸಿದೆ.

ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಮರ, ವಿದ್ಯುತ್ ಕಂಬಗಳು ರಸ್ತೆ ಮೇಲೆ ಉರುಳಿ ಬಿದ್ದಿದ್ದರಿಂದ ಕೆಲಕಾಲ ಹೊಸನಗರ – ರಿಪ್ಪನ್‌ಪೇಟೆ ಸಂಚಾರ ಅಸ್ತವ್ಯಸ್ತವಾಗಿತ್ತು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಘಟನಾ ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್ಐ ಪ್ರವೀಣ್ ಎಸ್ ಪಿ ಹಾಗೂ ಸಿಬ್ಬಂದಿಗಳು, ಗ್ರಾ.ಪಂ ಸದಸ್ಯೆ ಮಂಜುಳಾ ಕೆ ರಾವ್, ಪಿಡಿಒ ನಾಗರಾಜ್ ಎಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!