Ripponpete

ಮೇ 17ಕ್ಕೆ ಪಂಚಪೀಠಾಧೀಶ್ವರ ಅಡ್ಡಪಲ್ಲಕ್ಕಿ ಮಹೋತ್ಸವ ಮತ್ತು ಬಿಎಸ್‌ವೈಗೆ ಗೌರವ ಸಮರ್ಪಣೆ

ರಿಪ್ಪನ್‌ಪೇಟೆ ; ಶಿವಮೊಗ್ಗ ನಗರದಲ್ಲಿ ಮೇ 17 ರಂದು ಭಾನುವಾರ ನಡೆಯುವ ಪಂಚ ಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ ಮತ್ತು ಧರ್ಮಜಾಗೃತಿ ಸಮಾವೇಶ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಗೌರವ ಸಮರ್ಪಣೆ ಕಾರ್ಯಕ್ರಮಕ್ಕೆ ಹೊಸನಗರ ತಾಲ್ಲೂಕಿನ ಭಕ್ತರ ಸಮೂಹ ಮತ್ತು ಆಭಿಮಾನಿಗಳ ಬಳಗ ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಹೊಸನಗರ ತಾಲ್ಲೂಕು ಆಖಿಲ ಭಾರತ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಎಂ.ಎಸ್.ಉಮೇಶ್ ಕರೆ ನೀಡಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ರಿಪ್ಪನ್‌ಪೇಟೆಯ ಶ್ರೀಬಸವೇಶ್ವರ ವೀರಶೈವ ಸಮಾಜದ ಶಿವಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಂಚಪೀಠದ ಜಗದ್ಗುರುಗಳಾದ ಬಾಳೆಹೊನ್ನೂರು ಪೀಠದ ಜಗದ್ಗುರು ಪ್ರಸನ್ನ ರೇಣುಕಾ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು, ಕೇದಾರ ಪೀಠದ ಜಗದ್ಗುರು ಭೀಮಶಂಕರಲಿಂಗ ಶಿವಾಚಾರ್ಯ ಭಗವತ್ಪಾದರು, ಉಜ್ಜಯಿನಿ ಪೀಠದ ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು, ಶ್ರೀಶೈಲ ಪೀಠದ ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು, ಕಾಶಿ ಪೀಠದ ವಿದ್ಯಾವಾಚಸ್ವತಿ ಡಾ.ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ಧರ್ಮಜಾಗೃತಿ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡುವರು.

ಇದೇ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಪಂಚಪೀಠಾಧ್ಯಕ್ಷರು ಮತ್ತು ಸಮಾಜ ಬಾಂಧವರು ಸಂಘಟನೆಯವರು ಗೌರವ ಸಮರ್ಪಣೆಯನ್ನು ಮಾಡುವರು.

ಮುಖ್ಯ ಅತಿಥಿಗಳಾಗಿ ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಬಿ.ಕೆ.ಸಂಗಮೇಶ್ವರ, ಶಾಸಕ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಡಾ.ಧನಂಜಯ ಸರ್ಜಿ ಎಸ್.ಎನ್.ಚನ್ನಬಸಪ್ಪ, ಮಾಜಿ ಶಾಸಕರಾದ ಹೆಚ್.ಎಂ.ಚಂದ್ರಶೇಖರಪ್ಪ, ಎಸ್.ರುದ್ರೇಗೌಡ, ಬಸವೇಶ್ವರ ವೀರಶೈವ ಲಿಂಗಾಯಿತ ಸಮಾಜದ ಸೇವಾ ಸಂಘದ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಸೇರಿದಂತೆ ಜಿಲ್ಲೆ ಸಮಾಜದ ಹಿರಿಯ ಮುಖಂಡರು ಮಠಾಧೀಶರುಗಳು ಭಾಗವಹಿಸುವರು ಈ ಧರ್ಮಜಾಗೃತಿ ಕಾರ್ಯಕ್ರಮಕ್ಕೆ ತಾಲ್ಲೂಕಿನ ಸಮಾಜ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದರು.

ಈ ಸುದ್ದಿಗೋಷ್ಠಿಯಲ್ಲಿ ತಾಲ್ಲೂಕು ಅಖಿಲಭಾರತ ವೀರಶೈವ ಲಿಂಗಾಯಿತ ಸಮಾಜದ ಪದಾಧಿಕಾರಿಗಳಾದ ಲೀಲಾಶಂಕರ್, ಕರ್ಣೇಶ್ವರ ಡಿ.ಎಸ್, ಹಾಲಪ್ಪ ಚಿಕ್ಕಮಣತಿ, ಸದಾನಂದ,ವಾಣಿ ಶಿವಪ್ರಕಾಶ, ಇನ್ನಿತರರು ಹಾಜರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>