ಸಾಗರ ; ಇಲ್ಲಿನ ಆವಿನಹಳ್ಳಿ ಬಳಿ ಟಿಟಿ ವಾಹನವೊಂದು ಪಲ್ಟಿಯಾದ ಪರಿಣಾಮ 13 ಮಂದಿಗೆ ಗಾಯಗೊಂಡ ಘಟನೆ ನಡೆದಿದೆ.
ಗಾಯಾಳುಗಳನ್ನು ಸಾಗರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಿದ್ದಾರೆ.

ಬೆಂಗಳೂರು ಮೂಲದ ಪ್ರವಾಸಿಗರು ಸಿಗಂದೂರು ಚೌಡೆಶ್ವರಿಯ ದರ್ಶನಕ್ಕಾಗಿ ಸಾಗರದವರೆಗೂ ರೈಲಿನಲ್ಲಿ ಬಂದಿದ್ದರು. ಅಲ್ಲಿಂದ ಟೆಂಪೋ ಟ್ರಾವೆಲರ್ ವಾಹನ ಬಾಡಿಗೆಗೆ ಪಡೆದು ಸಿಗಂದೂರಿಗೆ ಹೊರಟಿದ್ದು, ಕೊರನಕೊಪ್ಪ ಗ್ರಾಮದ ಬಳಿ ಈ ವಾಹನ ಪಲ್ಟಿಯಾಗಿದೆ.
ವಾಹನದಲ್ಲಿ ಪ್ರಯಾಣಿಸುತ್ತಿದ್ದ 12 ಮಹಿಳೆಯರು ಮತ್ತು ಚಾಲಕ ಸೇರಿ ಒಟ್ಟು 13 ಮಂದಿ ಗಾಯಗೊಂಡಿದ್ದು ಇದರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.