ತೀರ್ಥಹಳ್ಳಿ: ಪಟ್ಟಣದ ಶ್ರೀ ರಾಮೇಶ್ವರ ದೇವಾಲಯದ ಸಮೀಪದಲ್ಲಿ ಮಘೆ ಮಳೆಯ ಆರ್ಭಟಕ್ಕೆ ಉಕ್ಕಿ ಹರಿಯುತ್ತಿರುವ ತುಂಗಾನದಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಬಾಗಿನ ಅರ್ಪಿಸಿದರು.
ಮಲೆನಾಡಿನ ಜೀವ ನದಿ ತುಂಗೆ ಈ ಬಾರಿ ಎರಡು ಬಾರಿ ಉಕ್ಕಿ ಹರಿದು ಶ್ರೀ ರಾಮ ಮಂಟಪ ಮುಳುಗುವಂತಾಗಿದೆ.ಕ್ಷೇತ್ರದ ಜನರ ಬದುಕು ಹಸನಾಗಲು ತುಂಗೆ ಸದಾ ಕಾಲ ಕಾಪಾಡಲಿ ಎಂದು ಶಾಸಕರು ಮಾತನಾಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ರಂಜಿತ್, ಎಂಐಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥ್ ಗೌಡ,ಪ.ಪಂ.ಅಧ್ಯಕ್ಷ ರಹಮತ್ ಅಜಾದಿ,ಪ.ಪಂ.ಉಪಾಧ್ಯಕ್ಷೆ ಗೀತಾರಮೇಶ್,ಪ.ಪಂ.ಸದಸ್ಯರು,ತಾ.ಪಂ.ಕಾರ್ಯನಿರ್ವಾಹಣಾಧಿಕಾರಿ ಶೈಲಾ ಮುಂತಾದವರಿದ್ದರು.
MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.