Chikmagaluru News

ಆಟೋ ರಿಕ್ಷಾದಲ್ಲಿ ಗಾಂಜಾ ಇಟ್ಟುಕೊಂಡಿದ್ದ ಇಬ್ಬರ ಬಂಧನ !

MUDIGERE ; ಆಟೋ ರಿಕ್ಷಾದಲ್ಲಿ ಗಾಂಜಾ ಇಟ್ಟುಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಾಸನಕುಡಿಗೆಯಲ್ಲಿ ಭಾನುವಾರ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಶಿವಮೊಗ್ಗದ ಮೊಹಮ್ಮದ್ ಪರ್ವೀಜ್ (40) ಹಾಗೂ ಶ್ರೀನಿವಾಸ (30) ಬಂಧಿತ ಆರೋಪಿಗಳು. ಬಾಳೂರಿನ ಬಾಸನಕುಡಿಗೆಯ ರಸ್ತೆ ಬಳಿ ಆಟೋ ನಿಲ್ಲಿಸಿಕೊಂಡು ನಿಂತಿದ್ದ ವೇಳೆ ಗಸ್ತು ತಿರುಗುತ್ತಿದ್ದ ಬಾಳೂರು ಸಬ್ ಇನ್ಸ್‌ಪೆಕ್ಟರ್ ದಿಲೀಪ್ ಕುಮಾರ್ ಹಾಗೂ ಪೊಲೀಸರು ಅನುಮಾನಗೊಂಡು ಆಟೋರಿಕ್ಷಾ ತಪಾಸಣೆ ಮಾಡಿದಾಗ 195 ಗ್ರಾಂ ತೂಕದ ಗಾಂಜಾ ಸೊಪ್ಪು, ಸುತ್ತಲೂ ಬಳಸುವ ಟಿಪ್ಸ್, ಗಾಂಜಾ ಬಳಸುವ ಚಿಮಣಿ ಪತ್ತೆಯಾಗಿದೆ. ಕೂಡಲೇ ಇಬ್ಬರು ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರೋಪಿಗಳಿಂದ ಗಾಂಜಾ ಸೊಪ್ಪು, ಸುತ್ತಲೂ ಬಳಸುವ ಟಿಪ್ಸ್, ಗಾಂಜಾ ಬಳಸುವ ಚಿಮಣಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]