ಅಪರಾಧ ಸುದ್ದಿ

ಬೈಕ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರ ಬಂಧನ !

ಸಾಗರ : ತಾಲ್ಲೂಕಿನ ಆನಂದಪುರ ಪೊಲೀಸ್ ಠಾಣೆಯ ಪಿ.ಎಸ್.ಐ. ಪ್ರವೀಣ್ ಅವರ ತ್ವರಿತ ಕಾರ್ಯಾಚರಣೆಯಿಂದ ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

WhatsApp Group Join Now
Telegram Group Join Now
Instagram Group Join Now

ಬಂಧಿತರಿಂದ 95 ಗ್ರಾಂ ಗಾಂಜಾ ಹಾಗೂ ಪ್ರಕರಣಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆಯಲಾಗಿದೆ.

ಜೂನ್ 23 ರಂದು ಮಧ್ಯಾಹ್ನ ಯಡೆಹಳ್ಳಿ ಗ್ರಾಮದಲ್ಲಿ ಗಸ್ತು ಕಾರ್ಯನಿರ್ವಹಿಸುತ್ತಿದ್ದ ಪಿ.ಎಸ್.ಐ. ಪ್ರವೀಣ್ ಅವರಿಗೆ ಸಾಗರದಿಂದ ಆನಂದಪುರ ಕಡೆಗೆ ಬೈಕ್ ಮೂಲಕ ಗಾಂಜಾ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ದೊರಕಿತು. ತಕ್ಷಣವೇ ಅವರು ಸಾಗರದ ಸಹಾಯಕ ಪೊಲೀಸ್ ಅಧೀಕ್ಷಕರಿಗೆ ವಿಷಯ ತಿಳಿಸಿ, ಅವರ ನಿರ್ದೇಶನದ ಮೇರೆಗೆ ಅಬಕಾರಿ ಉಪಾಧೀಕ್ಷಕರ ಸಮ್ಮುಖದಲ್ಲಿ ಉಳ್ಳೂರು ಗ್ರಾಮದ ಹೋಟೆಲ್ ಹತ್ತಿರ ವಾಹನ ತಪಾಸಣೆ ನಡೆಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಮಧ್ಯಾಹ್ನ 2.15ರ ಸುಮಾರಿಗೆ ಅನುಮಾನಾಸ್ಪದವಾಗಿ ಕಂಡ ಬೈಕನ್ನು ತಡೆದ ಬಳಿಕ ಪರಿಶೀಲನೆ ನಡೆಸಿದಾಗ, ಬೈಕಿನ ಪೆಟ್ರೋಲ್ ಟ್ಯಾಂಕ್ ಮೇಲಿದ್ದ ಬ್ಯಾಗಿನೊಳಗಿನ ಪ್ಲಾಸ್ಟಿಕ್ ಚೀಲದಲ್ಲಿ 95 ಗ್ರಾಂ ಗಾಂಜಾ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಮುಜಾಮಿಲ್ ಮತ್ತು ಹಫೀಜುಲ್ಲಾ ಎಂಬ ಇಬ್ಬರು ಆರೋಪಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!