RIPPONPETE ; ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಅರಸಾಳು ಗ್ರಾಪಂ ವ್ಯಾಪ್ತಿಯ 9ನೇ ಮೈಲಿಕಲ್ಲು ಬಳಿ ಹಾರೋಹಿತ್ತಲು ಗ್ರಾಮದ ಸುಧಾಕರ್ ಎಂಬುವರು ಅ.15ರಂದು ತಮ್ಮ ಬಜಾಜ್ ಸಿಟಿ 100 ಬೈಕ್ ನಿಲ್ಲಿಸಿದ್ದನ್ನು ಯಾರೋ ಕಳ್ಳತನ ಮಾಡಿಕೊಂಡು ಹೋಗಿದ್ದಾರೆಂದು ರಿಪ್ಪನ್‌ಪೇಟೆ ಠಾಣೆಗೆ ನೀಡಿದ ದೂರಿನ ಮೇರೆಗೆ ಕಲಂ 303(2) BNS ಕಾಯ್ದೆ ಅಡಿ ಪ್ರಕರಣ ದಾಖಲಿಸಿತ್ತು.
ಪ್ರಕರಣದ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಾದ ಶಿವಮೊಗ್ಗದ ಅಣ್ಣಾನಗರದ ನಿವಾಸಿಗಳಾದ ಸಾದಿಕ್ ವುಲ್ಲಾ @ ಚಮಟಿ (21) ಮತ್ತು ವಿವೇಕ್ @ ಸಿದ್ದು (23) ಇವರನ್ನು ಅ.17ರಂದು ಬಂಧಿಸಿ ಅಂದಾಜು 25 ಸಾವಿರ ರೂ.ಗಳ ಮೌಲ್ಯದ ಬಜಾಜ್ ಸಿಟಿ 100 ಬೈಕ್ ಅನ್ನು ಅಮಾನತು ಪಡಿಸಿಕೊಂಡಿದ್ದಾರೆ.

ಆರೋಪಿಗಳ ಪತ್ತೆಗಾಗಿ ಶಿವಮೊಗ್ಗ ಎಸ್.ಪಿ. ಮಿಥುನ್ ಕುಮಾರ್ ಜಿ ಕೆ, ಎಎಸ್ಐ 1 ಅನಿಲ್ ಕುಮಾರ್ ಭೂಮಾರೆಡ್ಡಿ, ಎಎಸ್ಐ 2 ಕಾರಿಯಪ್ಪ ಎ.ಜಿ ಇವರ ಮಾರ್ಗದರ್ಶದಲ್ಲಿ, ತೀರ್ಥಹಳ್ಳಿ ಡಿವೈಎಸ್ಪಿ ಗಜಾನನ ವಾಮನ ಸುತಾರ, ಹೊಸನಗರ ಸಿಪಿಐ ಗುರಣ್ಣ ಎಸ್ ಹೆಬ್ಬಾಳ್ ಮೇಲ್ವಿಚಾರಣೆಯಲ್ಲಿ ರಿಪ್ಪನ್‌ಪೇಟೆ ಪಿಎಸ್ಐ ಪ್ರವೀಣ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಸಿ.ಹೆಚ್.ಸಿ ಚನ್ನಪ್ಪ ಮತ್ತು ಸಿಪಿಸಿ ಸಂತೋಷ್ ರವರುಗಳನ್ನೊಳಗೊಂಡ ತನಿಖಾ ತಂಡವನ್ನು ರಚಿಸಲಾಗಿತ್ತು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.