Accident

ಗಣೇಶ ಮೂರ್ತಿ ತರಲು ಹೋಗುತ್ತಿದ್ದ ವೇಳೆ ಟಾಟಾ ಏಸ್ ವಾಹನ ಪಲ್ಟಿ ಇಬ್ಬರು ಸ್ಥಳದಲ್ಲೇ ಸಾ*ವು !

THARIKERE ; ಗಣೇಶ (Ganesha) ಮೂರ್ತಿ ತರಲು ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಶ್ರೀಧರ್ (20) ಧನುಷ್ (20) ಮೃತ ಯುವಕರು. ಗಣಪತಿ ತರಲು 9 ಜನ ಯುವಕರು ಹೋಗುತ್ತಿದ್ದರು. ಭೈರಾಪುರ ಗೇಟ್ ಬಳಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ವಾಹನ ಪಲ್ಟಿಯಾಗಿದೆ.

ಈ ಘಟನೆಯಲ್ಲಿ ಇಬ್ಬರು ಯುವಕರ ತಲೆಗೆ ಗಂಭೀರ ಗಾಯವಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ಯುವಕರನ್ನು ತರೀಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಹಾಗೂ ಗಾಯಾಳುಗಳೆಲ್ಲರು ಲಿಂಗದಹಳ್ಳಿ ನಿವಾಸಿಗಳು ಎಂದು ತಿಳಿದು ಬಂದಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಈ ಘಟನೆ ಸಂಬಂಧ ಲಿಂಗದಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!