ಹೊಸನಗರ

ರಿಪ್ಪನ್‌ಪೇಟೆ ಬಳಿ ಅಕ್ರಮ ಜಂಬಿಟ್ಟಿಗೆ ಸಾಗಾಟ: ಅಧಿಕಾರಿಗಳ ದಿಢೀರ್ ದಾಳಿ, ಎರಡು ಲಾರಿ ಜಪ್ತಿ

ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಜಂಬಿಟ್ಟಿಗೆ (ಕೆಂಪು ಕಲ್ಲು) ಸಾಗಿಸುತ್ತಿದ್ದ ಎರಡು ಲಾರಿಗಳನ್ನು ತಹಶೀಲ್ದಾರ್ ಭರತ್ ರಾಜ್ ನೇತೃತ್ವದ ಅಧಿಕಾರಿಗಳ ತಂಡ ವಶಕ್ಕೆ ಪಡೆದಿದೆ.

laterite stones

ಹೊಸನಗರ : ತಾಲೂಕಿನ ರಿಪ್ಪನ್‌ಪೇಟೆ ಸಮೀಪ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಜಂಬಿಟ್ಟಿಗೆ (ಕೆಂಪು ಕಲ್ಲು) ಸಾಗಿಸುತ್ತಿದ್ದ ಎರಡು ಲಾರಿಗಳನ್ನು ತಹಶೀಲ್ದಾರ್ ಭರತ್ ರಾಜ್ ನೇತೃತ್ವದ ಅಧಿಕಾರಿಗಳ ತಂಡ ಗುರುವಾರ ಮುಂಜಾನೆ ವಶಕ್ಕೆ ಪಡೆದಿದೆ.

WhatsApp Group Join Now
Telegram Group Join Now
Instagram Group Join Now

ಆನಂದಪುರದಿಂದ ಲಾರಿಗಳ ಮೂಲಕ ಜಂಬಿಟ್ಟಿಗೆ ಸಾಗಣೆ ಮಾಡಲಾಗುತ್ತಿದೆ ಎಂಬ ನಿಖರ ಮಾಹಿತಿ ಮೇರೆಗೆ ಎಚ್ಚೆತ್ತ ಅಧಿಕಾರಿಗಳು, ಗುರುವಾರ ಮುಂಜಾನೆ 5.30ರ ಹೊತ್ತಿಗೆ ವೊಡಹೊಸಳ್ಳಿ ರಸ್ತೆಯ ಬಳಿ ಕಾರ್ಯಾಚರಣೆ ನಡೆಸಿದ್ದಾರೆ. ಈ ಮಾರ್ಗವಾಗಿ ಬಂದ ವಾಹನಗಳನ್ನು ತಡೆದು ತಪಾಸಣೆ ಮಾಡಿದಾಗ ಅಕ್ರಮ ಸಾಗಾಟ ಪ್ರಕರಣ ಬೆಳಕಿಗೆ ಬಂದಿದೆ.

ಸದ್ಯ ವಶಪಡಿಸಿಕೊಂಡಿರುವ ಎರಡೂ ಲಾರಿಗಳನ್ನು ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಜಂಬಿಟ್ಟಿಗೆ ಸಾಗಣೆಗೆ ಬಳಸಿದ ಅನುಮತಿ ಪತ್ರ ಹಾಗೂ ಇತರ ದಾಖಲೆಗಳ ಕುರಿತಾಗಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಈ ಹಠಾತ್ ಕಾರ್ಯಾಚರಣೆಯಲ್ಲಿ ತಹಶೀಲ್ದಾರ್ ಭರತ್ ರಾಜ್ ಅವರೊಂದಿಗೆ ಸಿಬ್ಬಂದಿಗಳಾದ ಗಣೇಶ್ ಹಾಗೂ ಶಿವಪ್ಪ ಪಾಲ್ಗೊಂಡಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!