ಶಿವಮೊಗ್ಗ ; ಬೈಕ್ ಮತ್ತು ಹಾಲಿನ ವಾಹನ ನಡುವೆ ನಗರದ ಸರ್ಕ್ಯೂಟ್ ಹೌಸ್ ಸರ್ಕಲ್‌ನಲ್ಲಿ ಇಂದು ಬೆಳಗಿನಜಾವ 4:30ರ ಸುಮಾರಿಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮೆಡಿಕಲ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾ*ವನ್ನಪ್ಪಿದ ಘಟನೆ ನಡೆದಿದೆ.
ಮೂರನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಾದ ಉಡುಪಿಯ ಆದಿತ್ಯ (21) ಮತ್ತು ನ್ಯಾಮತಿಯ ಸುರಹೊನ್ನೆಯ ಸಂದೀಪ್ (21) ಮೃತರು. ಇವರು ಭಾರ್ಗವಿ ಪೆಟ್ರೋಲ್ ಬಂಕ್ ನಿಂದ ತಮ್ಮ ಬೈಕಿಗೆ ಪೆಟ್ರೋಲ್ ತುಂಬಿಸಿಕೊಂಡು ಹಾಸ್ಟೆಲ್ ಗೆ ವಾಪಾಸ್ ಆಗುವಾಗ ನಂದಿನಿ ಹಾಲಿನ ವಾಹನ ಡಿಕ್ಕಿಯಾಗಿ ಬೈಕಿನಿಂದ ಕೆಳಗೆ ಬಿದ್ದು ಗಾಯಗೊಂಡು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಇನ್ನು ಘಟನೆಯಲ್ಲಿ ಹಾಲಿನ ವಾಹನದಲ್ಲಿದ್ದ ಹಾಲಿನ ಕ್ರೇಟ್‌ಗಳೆಲ್ಲ ಕೆಳಗೆ ಬಿದ್ದು ಪ್ಯಾಕೆಟ್‌ಗಳು ಒಡೆದು ಹಾಲು ರಸ್ತೆಯ ಮೇಲೆ ಹರಿದಿದೆ.
ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಯುವಕರ ಮೃತದೇಹಗಳನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.