CHIKKAMAGALURU ; ಆಟೊಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಆಟೊ ಚಾಲಕ ಹಾಗೂ ಪ್ರಯಾಣಿಕ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶುಕ್ರವಾರ ರಾತ್ರಿ ನಗರದ ನಲ್ಲೂರು ಗೇಟ್ ಬಳಿ ಸಂಭವಿಸಿದೆ.
ಮೃತರನ್ನು ಮಲ್ಲೇದೇವರನಹಳ್ಳಿ ಗ್ರಾಮದ ಚಂದ್ರಶೇಖರ್ (38) ಮತ್ತು ರಾಘವೇಂದ್ರ (40) ಎಂದು ಗುರುತಿಸಲಾಗಿದೆ.

ಶುಕ್ರವಾರ ರಾತ್ರಿ ಮೂಡಿಗೆರೆಯಿಂದ ಬೆಂಗಳೂರಿಗೆ ಚಿಕ್ಕಮಗಳೂರು ಮಾರ್ಗವಾಗಿ ಹೊರಟಿದ್ದ ಖಾಸಗಿ ಸಾರಿಗೆ ಬಸ್ ಚಿಕ್ಕಮಗಳೂರು ನಗರ ಸಮೀಪದ ನಲ್ಲೂರು ಗೇಟ್ ಎಂಬಲ್ಲಿ ಬರುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಆಟೊಗೆ ಢಿಕ್ಕಿ ಹೊಡೆದಿದೆ. ಢಿಕ್ಕಿ ರಭಸಕ್ಕೆ ಅಟೊ ನಜ್ಜುಗುಜ್ಜಾಗಿದ್ದು ಆಟೊ ಚಾಲಕ ಚಂದ್ರಶೇಖರ್ ಹಾಗು ಪ್ರಯಾಣಿಕ ರಾಘವೇಂದ್ರ ಅವರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತರಾಗಿದ್ದಾರೆ.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.