ಶಿವಮೊಗ್ಗ:ಶಿವಮೊಗ್ಗದ ಯಡವಾಲ ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದ್ದು, ಇಬ್ಬರು ಯುವಕರು ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಮೃತರನ್ನು ಗೌತಮ್ ನಾಯ್ಕ್ (22) ಮತ್ತು ಕುಂಬರಗುಂಡಿ ನಿವಾಸಿ ಚಿರಂಜೀವಿ (22) ಎಂದು ಗುರುತಿಸಲಾಗಿದೆ. ಮಾಹಿತಿ ಪ್ರಕಾರ, ಸ್ನೇಹಿತನ ತಂಗಿಯ ಮಗು ನೋಡಲು ಸುಮಾರು 10 ಮಂದಿ ಯುವಕರ ಗುಂಪು ಗ್ರಾಮಕ್ಕೆ ತೆರಳಿದ್ದು,ಬಳಿಕ ಈರುಳ್ಳಿ ಬೆಳೆದ ತೋಟವೊಂದರಲ್ಲಿ ಪಾರ್ಟಿ ಮಾಡಲು ತೋಟಕ್ಕೆ ಹೋಗಿದ್ದಾರೆ.
ಪಾರ್ಟಿ ವೇಳೆ ಎಣ್ಣೆಯ ಮತ್ತಿನಿಂದಾಗಿ, ಯುವಕರಲ್ಲಿ ಒಬ್ಬ ಕೃಷಿ ಹೊಂಡದ ಬಳಿ ಹೋಗಿದ್ದಾಗ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ. ಇದನ್ನು ಕಂಡ ಇನ್ನೊಬ್ಬನು ರಕ್ಷಿಸಲು ಹೋಗಿ, ಆತನು ಕೂಡ ನೀರಿನಲ್ಲಿ ಮುಳುಗಿದ್ದಾನೆ.ಕಾರಣ ಇಬ್ಬರೂ ವಾಪಸ್ಸಾಗಲಿಲ್ಲ. ಮೃತದೇಹಗಳನ್ನು ಸ್ಥಳೀಯರು ಮೇಲಕ್ಕೆ ಎತ್ತಿದ್ದು, ಹೆಚ್ಚಿನ ತನಿಖೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದ್ದು, ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More :ಮನೆಗೊಂದು ಗಿಡ ಬೆಳೆಸಿ ಮುಂದಿನ ಪೀಳಿಗೆಗೆ ಪ್ರಕೃತಿಯನ್ನು ಸಂರಕ್ಷಿಸಿ
MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.