Ripponpete

ರಿಪ್ಪನ್‌ಪೇಟೆ ; ಹೃದಯಾಘಾತದಿಂದ ಟಯರ್ ವ್ಯಾಪಾರಿ ನಾಸೀರುದ್ದೀನ್ ಸಾವು !

ರಿಪ್ಪನ್‌ಪೇಟೆ ; ಇಲ್ಲಿನ ಹೊಸನಗರ ರಸ್ತೆಯಲ್ಲಿ ದ್ವಿಚಕ್ರ ವಾಹನಗಳ ಟಯರ್ ಅಂಗಡಿ, ಪಂಚರ್ ಶಾಪ್ ನಡೆಸುತ್ತಿದ್ದ ನಾಸೀರುದ್ದೀನ್ ಯಾನೆ ಮೌಲಾನ (46) ಹೃದಯಘಾತದಿಂದ ಬುಧವಾರ ಸಂಜೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಮದನಿ ಕಾಲೋನಿ ನಿವಾಸಿಯಾಗಿದ್ದ ಅವರು ತಮ್ಮ ಸರಳ ಸಜ್ಜನಿಕೆಯಿಂದ ಜನಾನುರಾಗಿಯಾಗಿದ್ದರು. ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಫಲಿಸದೆ ಅವರು ಇಂದು ಸಂಜೆ ಕೊನೆಯುಸಿರೆಳೆದಿದ್ದಾರೆ.

ಮೃತರಿಗೆ ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ರಿಪ್ಪನ್‌ಪೇಟೆ ಸಾಗರ ರಸ್ತೆಯಲ್ಲಿರುವ ಖಬರ್‌ಸ್ಥಾನದಲ್ಲಿ ಗುರುವಾರ ಬೆಳಿಗ್ಗೆ 10 ಗಂಟೆಗೆ ಮೃತರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!