ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ | ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಗೆ ಭರ್ಜರಿ ಜಯ

Written by malnadtimes.com

Published on:

CHIKKAMAGALURU | ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ 2,28,203 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಜಯಪ್ರಕಾಶ್ ಹೆಗ್ಡೆಗೆ ಹೀನಾಯ ಸೋಲಾಗಿದೆ.

WhatsApp Group Join Now
Telegram Group Join Now
Instagram Group Join Now

ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ ಕೋಟ ಶ್ರೀನಿವಾಸ್ ಪೂಜಾರಿ ಅವರು ಗೆಲುವಿನ ನಗೆ ಬೀರಿದರು.

ಈ ಸಂದರ್ಭದಲ್ಲಿ ಕಾರ್ಯಕರ್ತರು ಅವರನ್ನು ಮೇಲಕ್ಕೆತ್ತಿ ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು.

ಯಾರಿಗೆ ಎಷ್ಟು ಮತ ?

  • ಕೋಟ ಶ್ರೀನಿವಾಸ ಪೂಜಾರಿ – ಬಿಜೆಪಿ : 6,33,570 ಮತಗಳು
  • ಜಯಪ್ರಕಾಶ್ ಹೆಗ್ಡೆ – ಕಾಂಗ್ರೆಸ್ : 4,05,367 ಮತಗಳು

ಉಡುಪಿ – ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಒಟ್ಟು 9,63,738 ಮತದಾರರಿದ್ದು, 4,75, 419 ಪುರುಷ ಮತದಾರರು ಹಾಗೂ 4,88,284 ಮಹಿಳಾ ಮತದಾರರಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಬಿಜೆಪಿ ಭದ್ರಕೋಟೆಯಾಗಿರುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಈ ಬಾರಿಯೂ ಬಿಜೆಪಿ ಪಾಲಾಗಿದೆ.

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ಶೋಭಾ ಕರಂದ್ಲಾಜೆ ಅವರು ಜೆಡಿಎಸ್‌ನ ಪ್ರಮೋದ್ ಮಧ್ವರಾಜ್ ಅವರನ್ನು 3,49,599 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಶೇ.62.43ರಷ್ಟು ಮತಗಳನ್ನು ಪಡೆದಿತ್ತು.

2014ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ಶೋಭಾ ಕರಂದ್ಲಾಜೆ ಅವರು ಕಾಂಗ್ರೆಸ್‌ನ ಕೆ.ಜಯಪ್ರಕಾಶ್ ಹೆಗ್ಡೆ ಅವರನ್ನು 1,81,643 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಬಿಜೆಪಿ ಶೇ.56.2ರಷ್ಟು ಮತಗಳನ್ನು ಗಳಿಸಿದೆ.

2009ರ ಸಾರ್ವತ್ರಿಕ ಚುನಾವಣೆಯಲ್ಲಿ ಡಿ.ವಿ.ಸದಾನಂದ ಗೌಡ ಅವರು ಕಾಂಗ್ರೆಸ್‌ನ ಪಕ್ಷದ ಜಯಪ್ರಕಾಶ್ ಹೆಗ್ಡೆ ಅವರನ್ನು 27,018 ಮತಗಳ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಬಿಜೆಪಿ ಶೇ.48.06ರಷ್ಟು ಮತಗಳನ್ನು ಪಡೆದಿತ್ತು.

ಕೋಟ ಶ್ರೀನಿವಾಸ ಪೂಜಾರಿ :

ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಮಾಜಿ ಸಚಿವರಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರು, ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಅವರು 2019 ರಿಂದ 2023 ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ಸದನದ ನಾಯಕರಾಗಿ ಮತ್ತು 2018-19 ರ ಅವಧಿಯಲ್ಲಿ ವಿಧಾನ ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ್ದಾರೆ.

ಜಯಪ್ರಕಾಶ್ ಹೆಗ್ಡೆ :

ಜಯಪ್ರಕಾಶ್ ಹೆಗ್ಡೆ ಅವರು 2024ಲ್ಲಿ ಕಾಂಗ್ರೆಸ್ ಅಭ್ಯರ್ಥಿ. 1994ರಲ್ಲಿ ಜನತಾದಳದ ಅಭ್ಯರ್ಥಿಯಾಗಿ ಹಾಗೂ 1999 ಮತ್ತು 2004ರಲ್ಲಿ ಸ್ವತಂತ್ರ ಶಾಸಕರಾಗಿ ಬ್ರಹ್ಮಾವರ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಕ್ಷೇತ್ರ ಪುನರ್ವಿಂಗಡಣೆಯಿಂದಾಗಿ ಬ್ರಹ್ಮಾವರ ಕ್ಷೇತ್ರ ಅಸ್ತಿತ್ವ ಕಳೆದುಕೊಂಡಾಗ 2008ರ ವಿಧಾನಸಭೆ ಚುನಾವಣೆಯಲ್ಲಿ ಕುಂದಾಪುರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿದ್ದರು ಅವರು, 2012ರ ಉಪಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಬಿಜೆಪಿ ಸೇರಿದ ನಂತರ ಹೆಗ್ಡೆ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು. ನಂತರ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿ ಟಿಕೆಟ್ ಪಡೆದುಕೊಂಡಿದ್ದರು.

Read More :Karnataka Rain | ಇಂದಿನಿಂದ ಮೂರು ದಿನ ಭಾರಿ ಮಳೆ ಸಾಧ್ಯತೆ‌ ; ಈ ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್ ಘೋಷಣೆ

Leave a Comment