SAGARA ; ಹಿರಿಯ ಸಾಹಿತಿ ನಾ. ಡಿಸೋಜ (88) ವಯೋಸಹಜ ಆರೋಗ್ಯದಿಂದ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧನರಾದರು.
ಅವರ ಪುತ್ರ ನವೀನ್ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ತಮ್ಮ ತಂದೆಯ ನಿಧನದ ಬಗ್ಗೆ ಮಾಹಿತಿ ನೀಡಿದ್ದಾರೆ. ‘ಜನವರಿ 5ರಂದು ಸಂಜೆ 7:30ಕ್ಕೆ ಅನಾರೋಗ್ಯದ ಕಾರಣ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಪೂಜ್ಯ ತಂದೆ ದೈವಾಧೀನರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ನಾಳೆ ಮಧ್ಯಾಹ್ನ ಸಾಗರದ ಅವರ ಸ್ವಗೃಹದಲ್ಲಿ ಸಾರ್ವಜನಿಕ ವೀಕ್ಷಣೆಗೆ ಇಡಲಾಗುವುದು’ ಎಂದು ತಿಳಿಸಿದ್ದಾರೆ.
ಮೃತ ನಾ.ಡಿಸೋಜ ಅವರಿಗೆ ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಇದ್ದಾರೆ. ನಾರ್ಬರ್ಟ್ ಡಿಸೋಜ ಅವರು ಹುಟ್ಟಿದ್ದು ಜೂನ್ 6, 1937 ರಲ್ಲಿ. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಜನಿಸಿದರು. ತಂದೆ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾಗಿದ್ದ ಎಫ್.ಪಿ. ಡಿಸೋಜ, ತಾಯಿ ರೂಪೀನಾ ಡಿಸೋಜ.