ಸಾಗರ

ಹಿರಿಯ ಸಾಹಿತಿ ನಾ. ಡಿಸೋಜ ಇನ್ನಿಲ್ಲ !

SAGARA ; ಹಿರಿಯ ಸಾಹಿತಿ ನಾ. ಡಿಸೋಜ (88) ವಯೋಸಹಜ ಆರೋಗ್ಯದಿಂದ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧನರಾದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಅವರ ಪುತ್ರ ನವೀನ್ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ತಮ್ಮ ತಂದೆಯ ನಿಧನದ ಬಗ್ಗೆ ಮಾಹಿತಿ ನೀಡಿದ್ದಾರೆ. ‘ಜನವರಿ 5ರಂದು ಸಂಜೆ 7:30ಕ್ಕೆ ಅನಾರೋಗ್ಯದ ಕಾರಣ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಪೂಜ್ಯ ತಂದೆ ದೈವಾಧೀನರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ನಾಳೆ ಮಧ್ಯಾಹ್ನ ಸಾಗರದ ಅವರ ಸ್ವಗೃಹದಲ್ಲಿ ಸಾರ್ವಜನಿಕ ವೀಕ್ಷಣೆಗೆ ಇಡಲಾಗುವುದು’ ಎಂದು ತಿಳಿಸಿದ್ದಾರೆ.

ಮೃತ ನಾ.ಡಿಸೋಜ ಅವರಿಗೆ ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಇದ್ದಾರೆ. ನಾರ್ಬರ್ಟ್ ಡಿಸೋಜ ಅವರು ಹುಟ್ಟಿದ್ದು ಜೂನ್ 6, 1937 ರಲ್ಲಿ. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಜನಿಸಿದರು. ತಂದೆ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾಗಿದ್ದ ಎಫ್.ಪಿ. ಡಿಸೋಜ, ತಾಯಿ ರೂಪೀನಾ ಡಿಸೋಜ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>