Shivamogga News

ನೀರಾನೆ ದಾಳಿಯಲ್ಲಿ ಪಶುವೈದ್ಯೆ ಸಾವು: ‘ಸಮಾಜಕ್ಕೆ ದೊಡ್ಡ ನಷ್ಟ’ – ಸಚಿವ ಮಧು ಬಂಗಾರಪ್ಪ ಸಂತಾಪ

ಶಿವಮೊಗ್ಗ: ತ್ಯಾವರೆಕೊಪ್ಪ ಮೃಗಾಲಯದಲ್ಲಿ ವನ್ಯಜೀವಿಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ನೀರಾನೆ ದಾಳಿಗೆ ಒಳಗಾಗಿ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಮೃತಪಟ್ಟಿರುವುದು ಅತ್ಯಂತ ದುಃಖಕರ ಸಂಗತಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಸಂತಾಪ ಸೂಚಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
Madhu Bangarappa
📢 Stay Updated! Join our WhatsApp Channel Now →

ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ವನ್ಯಜೀವಿಗಳ ಸೇವೆಗೆ ತಮ್ಮ ವೃತ್ತಿ ಬದುಕನ್ನು ಮುಡಿಪಾಗಿಟ್ಟಿದ್ದ ಯುವ ವೈದ್ಯೆಯನ್ನು ಕಳೆದುಕೊಂಡಿರುವುದು ಕೇವಲ ಅವರ ಕುಟುಂಬ ಹಾಗೂ ಇಲಾಖೆಗೆ ಮಾತ್ರವಲ್ಲ, ಇಡೀ ಸಮಾಜಕ್ಕೂ ದೊಡ್ಡ ನಷ್ಟವಾಗಿದೆ ಎಂದು ಹೇಳಿದರು.

ಇಂತಹ ದುಃಖದ ಸಂದರ್ಭದಲ್ಲಿ ಸರ್ಕಾರವು ಮೃತರ ಕುಟುಂಬದೊಂದಿಗೆ ನಿಲ್ಲಲಿದೆ ಎಂದು ಭರವಸೆ ನೀಡಿದ ಅವರು, ಈಗಾಗಲೇ ಅರಣ್ಯ ಸಚಿವರು ಈ ಘಟನೆ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಿರುವುದನ್ನು ಉಲ್ಲೇಖಿಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

“ಡಾ. ಸಮೀಕ್ಷಾ ರೆಡ್ಡಿ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೂ, ಸಹೋದ್ಯೋಗಿಗಳಿಗೂ ದೇವರು ನೀಡಲಿ” ಎಂದು ಸಚಿವರು ಪ್ರಾರ್ಥಿಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650