Ripponpete

ರೈತರ ಹೋರಾಟಕ್ಕೆ ಸಂದ ಜಯ, ಹೋರಾಟಕ್ಕೆ ಬೆಂಬಲಿಸಿದವರಿಗೆ ಕೃತಜ್ಞತೆ ; ವೀರೇಶ್ ಆಲವಳ್ಳಿ

ರಿಪ್ಪನ್‌ಪೇಟೆ ; ಕಳೆದ ಹಲವು ತಿಂಗಳಿಂದ ಮಲೆನಾಡಿನ ರೈತರನ್ನು ಕೆಂಗಡಿಸಿದ್ದ ಕಾಡಾನೆಗಳನ್ನು ಸ್ಥಳಾಂತರಗೊಳಿಸುವಂತೆ ಆಗ್ರಹಿಸಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ನೇತೃತ್ವದಲ್ಲಿ ಈ ಭಾಗದ ರೈತ ಸಂಘಟನೆಗಳೊಂದಿಗೆ ಶಿವಮೊಗ್ಗ ಜಿಲ್ಲಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಕಛೇರಿಯ ಮುಂಭಾಗ ಜನವರಿ 24 ರಂದು ಪ್ರತಿಭಟನೆ ನಡೆಸಲಾಗಿದ್ದು ಈ ನಮ್ಮ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ವೀರೇಶ್ ಆಲವಳ್ಳಿ ವಿವರಿಸಿ, ಹೋರಾಟದಲ್ಲಿ ಭಾಗವಹಿಸಿದ ರೈತರಿಗೆ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದರು.

WhatsApp Group Join Now
Telegram Group Join Now
Instagram Group Join Now

ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ಕಛೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಲೆನಾಡಿನ ಹೊಸನಗರ, ಸಾಗರ, ಶಿವಮೊಗ್ಗ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಕಾಡಾನೆಗಳ ಉಪಟಳದಿಂದಾಗಿ ರೈತರ ಭತ್ತ, ಕಬ್ಬು, ಅಡಿಕೆ, ಬಾಳೆ ಬೆಳೆಯನ್ನು ತುಳಿದು ತಿಂದು ಧ್ವಂಸಗೊಳಿಸಿದ್ದು ಅಲ್ಲದೆ ಹಗಲು-ರಾತ್ರಿ ರೈತರು ಹೊಲಗದ್ದೆಗಳಿಗೆ ಹೋಗುವುದು ಕಷ್ಟಕರವಾಗಿ ಭಯದಲ್ಲಿ ಜೀವನ ಸಾಗಿಸಬೇಕಾದ ಅನಿವಾರ್ಯತೆ ಎದುರಾಗಿತು. ಅಲ್ಲದೆ ದರಗೆಲೆ ತರಲು ಹೋದ ವ್ಯಕ್ತಿಯನ್ನು ತಳಿದು ಸಾಯಿಸಿದ ಪ್ರಸಂಗವೂ ನಡೆದಿದ್ದು ಇದರಿಂದಾಗಿ ಮಲೆನಾಡಿನ ಜನತೆ ಹೈರಾಣರಾಗಿದ್ದರು.

ಈ ಕುರಿತು ಮಾಜಿ ಸಚಿವ ಹರತಾಳು ಹಾಲಪ್ಪ ನೇತೃತ್ವದಲ್ಲಿ ಜನವರಿ 24 ರಂದು ರೈತನಾಗರೀಕರೊಂದಿಗೆ ಶಿವಮೊಗ್ಗ ಜಿಲ್ಲಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ಕಾಡಾನೆಗಳ ಹಿಂಡುಗಳನ್ನು ಈ ಕೂಡಲೇ ಸ್ಥಳಾಂತರ ಮಾಡುವಂತೆ ಆಗ್ರಹಿಸಿದ ಬೆನ್ನಲ್ಲೇ ಕಾಡಾನೆಗಳ ಗುಂಪು ಹಿಂತಿರುಗಿರುತ್ತವೆ. ಇದರಿಂದ ರೈತಾಪಿ ವರ್ಗ ಶಾಲಾ,ಕಾಲೇಜ್ ವಿದ್ಯಾರ್ಥಿಗಳು ಸಾರ್ವಜನಿಕರು ನಿಟ್ಟುಸಿರು ಬಿಡುವಂತಾಗಿದೆ ಎಂದು ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ವೀರೇಶ್ ಆಲವಳ್ಳಿ ವಿವರಿಸಿ ಹೋರಾಟದಲ್ಲಿ ಭಾಗವಹಿಸಿದ ಶಿವಮೊಗ್ಗ ಶಾಸಕ ಚನ್ನಬಸಪ್ಪ, ಆರಗ ಜ್ಞಾನೇಂದ್ರ, ಡಿ.ಎಸ್.ಅರುಣ್ ಮಾಜಿ ಶಾಸಕರಾದ ಬಿ.ಸ್ವಾಮಿರಾವ್, ಕೆ.ಜಿ.ಕುಮಾರಸ್ವಾಮಿ ಮತ್ತು ರೈತರಿಗೆ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿ, ನಮ್ಮ ಹೋರಾಟಕ್ಕೆ ಸಂದ ಜಯವಾಗಿದೆ ಎಂದ ಅವರು, ಮುಂದಿನ ದಿನಗಳಲ್ಲಿ ಈ ಭಾಗಕ್ಕೆ ಆನೆಗಳು ಬಾರದಂತೆ ಕಾಡಿನ ದಾರಿಯಲ್ಲಿ ಅಡ್ಡಲಾಗಿ ಬೃಹತ್ ಗಾತ್ರದ ಟಂಚ್ ತೆಗೆಯುವ ಮೂಲಕ ರಸ್ತೆ ಬಂದ್ ಮಾಡಲಾಗಿದೆ ಎಂದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಮುಖಂಡರಾದ ಆರ್.ಟಿ.ಗೋಪಾಲ, ತಾಲ್ಲೂಕು ಬಿಜೆಪಿ ಉಪಾಧ್ಯಕ್ಷ ಎಂ.ಬಿ.ಮಂಜುನಾಥ, ಎಂ.ಸುರೇಶ್ ಸಿಂಗ್, ಯುವ ಮೋರ್ಚಾ ಕಾರ್ಯದರ್ಶಿ ಮುರುಳಿ ಕೆರೆಹಳ್ಳಿ, ಷಣ್ಮುಖಪ್ಪ, ದಿವಾಕರ್ ಇನ್ನಿತರರು ಹಾಜರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!