ಹೊಸನಗರ

50 ವರ್ಷಗಳ ಸೇವೆ: 77ರ ಹರೆಯದಲ್ಲೂ ಸೈಕಲ್‌ನಲ್ಲಿ ಪಿಗ್ಮಿ ಸಂಗ್ರಹಿಸುವ ವಿಜಯಕುಮಾರ್‌ಗೆ ಸನ್ಮಾನ

ವಯಸ್ಸು ಹೆಚ್ಚಾದಂತೆ ಆಧ್ಯಾತ್ಮಿಕ ಚಿಂತನೆ, ಯೋಗಾಭ್ಯಾಸ ಹಾಗೂ ದೇವರ ಧ್ಯಾನದಲ್ಲಿ ತೊಡಗಿಸಿಕೊಳ್ಳುವುದು ದೈಹಿಕ ಮತ್ತು ಮಾನಸಿಕ ಆರೋಗ್ಯದ ದೃಷ್ಟಿಯಿಂದಲೂ ಉತ್ತಮ ಎಂದು ನಿವೃತ್ತ ಕೆಜಿಐಡಿ ಅಧಿಕಾರಿ ಮಂಡಾನಿ ಕುಮಾರ್ ಅಭಿಪ್ರಾಯಪಟ್ಟರು.

77ರ ಹರೆಯದಲ್ಲೂ ಸೈಕಲ್‌ನಲ್ಲಿ ಪಿಗ್ಮಿ ಸಂಗ್ರಹಿಸುವ ವಿಜಯಕುಮಾರ್‌ Vijaykumar

ಹೊಸನಗರ: ನಾವು ಸಮಾಜಕ್ಕೆ ಸಲ್ಲಿಸಿರುವ ಜನೋಪಕಾರಿ ಸೇವೆಗಳನ್ನು ಗುರುತಿಸುವ ಜನರು, ನಾವು ಹಿರಿಯ ನಾಗರಿಕರಾದಾಗ ಗೌರವದಿಂದ ಕಾಣುತ್ತಾರೆ. ವಯಸ್ಸು ಹೆಚ್ಚಾದಂತೆ ಆಧ್ಯಾತ್ಮಿಕ ಚಿಂತನೆ, ಯೋಗಾಭ್ಯಾಸ ಹಾಗೂ ದೇವರ ಧ್ಯಾನದಲ್ಲಿ ತೊಡಗಿಸಿಕೊಳ್ಳುವುದು ದೈಹಿಕ ಮತ್ತು ಮಾನಸಿಕ ಆರೋಗ್ಯದ ದೃಷ್ಟಿಯಿಂದಲೂ ಉತ್ತಮ ಎಂದು ನಿವೃತ್ತ ಕೆಜಿಐಡಿ ಅಧಿಕಾರಿ ಮಂಡಾನಿ ಕುಮಾರ್ ಅಭಿಪ್ರಾಯಪಟ್ಟರು.

WhatsApp Group Join Now
Telegram Group Join Now
Instagram Group Join Now

ಪಟ್ಟಣದ ನಿವೃತ್ತ ನೌಕರರ ಸಂಘದಲ್ಲಿ ಆಯೋಜಿಸಿದ್ದ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಪಟ್ಟಣ ಪಂಚಾಯಿತಿಯ ಮಾಜಿ ಸದಸ್ಯ ಮಹಮದ್ ಯಾಸಿರ್, ಹಿರಿಯ ನಾಗರಿಕರನ್ನು ಗೌರವಿಸುವುದು ಹಾಗೂ ಅವರ ಅನುಭವ ಮತ್ತು ಮಾರ್ಗದರ್ಶನವನ್ನು ಗೌರವದಿಂದ ಸ್ವೀಕರಿಸುವುದು ಇಂದಿನ ಯುವಜನಾಂಗದ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ನಗರ ಪ್ರೌಢಶಾಲೆಯ ಭಾಗ್ಯಲಕ್ಷ್ಮೀ ಮಾತನಾಡಿ, ಇಂದಿನ ಯುವ ಪೀಳಿಗೆಯಲ್ಲಿ ಹಿರಿಯರನ್ನು ಕಡೆಗಣಿಸುವ ಪ್ರವೃತ್ತಿ ಕಂಡುಬರುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಹಿರಿಯರಿಗೆ ಕುಟುಂಬ ಹಾಗೂ ಸಮಾಜದಲ್ಲಿ ಗೌರವಯುತ ಸ್ಥಾನ ಕಲ್ಪಿಸುವ ಅಗತ್ಯವಿದೆ ಎಂದರು.

50 ವರ್ಷಗಳಿಂದ ಪಿಗ್ಮಿ ಸಂಗ್ರಹ :

ಕಾರ್ಯಕ್ರಮದಲ್ಲಿ ಕಳೆದ 50 ವರ್ಷಗಳಿಂದ ಪಿಗ್ಮಿ ಸಂಗ್ರಹಿಸುವ ಸೇವೆಯಲ್ಲಿ ತೊಡಗಿಸಿಕೊಂಡಿರುವ 77 ವರ್ಷದ ಜೆ. ವಿಜಯಕುಮಾರ್ (ಜವಳಿ ವಿಜಯಕುಮಾರ್ ಬಾಳಿಗ) ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ನಗರದ ಗುಜರಿಪೇಟೆ ನಿವಾಸಿಯಾಗಿರುವ ವಿಜಯಕುಮಾರ್ ಅವರು 77ನೇ ವಯಸ್ಸಿನಲ್ಲಿಯೂ ತಮ್ಮ ಸೇವೆಯನ್ನು ಮುಂದುವರಿಸಿದ್ದಾರೆ. ಪ್ರತಿದಿನ ಸುಮಾರು 8ರಿಂದ 10 ಕಿ.ಮೀ.ವರೆಗೆ ಸೈಕಲ್‌ನಲ್ಲಿ ಸಂಚರಿಸಿ ಪಿಗ್ಮಿ ಸಂಗ್ರಹಿಸುವ ಮೂಲಕ ಗ್ರಾಹಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ.

ವಿಜಯಕುಮಾರ್ ಅವರು ತಮ್ಮ ವೃತ್ತಿ ಜೀವನವನ್ನು ಸಿಂಡಿಕೇಟ್ ಬ್ಯಾಂಕ್‌ನಲ್ಲಿ ಪಿಗ್ಮಿ ಸಂಗ್ರಾಹಕರಾಗಿ ಆರಂಭಿಸಿದ್ದರು. ಬಳಿಕ ಸಿಂಡಿಕೇಟ್ ಬ್ಯಾಂಕ್ ಕೆನರಾ ಬ್ಯಾಂಕ್‌ನಲ್ಲಿ ವಿಲೀನಗೊಂಡ ನಂತರವೂ ಕೆನರಾ ಬ್ಯಾಂಕ್‌ನ ಪಿಗ್ಮಿ ಸಂಗ್ರಾಹಕರಾಗಿ ಸೇವೆ ಮುಂದುವರಿಸಿದ್ದಾರೆ. ಐದು ದಶಕಗಳ ಸುದೀರ್ಘ ಸೇವಾವಧಿಯಲ್ಲಿ ಗ್ರಾಹಕರ ವಿಶ್ವಾಸಕ್ಕೆ ಪಾತ್ರರಾಗಿರುವ ಅವರು, ತಮ್ಮ ಸೇವೆಯಲ್ಲಿ ಯಾವುದೇ ಕಪ್ಪುಚುಕ್ಕೆ ಇಲ್ಲದ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿರುವುದು ವಿಶೇಷವಾಗಿದೆ.

ಕಾರ್ಯಕ್ರಮದಲ್ಲಿ ಶಾರದಾ ಗೋಖಲೆ ಪ್ರಾರ್ಥಿಸಿದರು. ರಂಗನಾಥ್ ಸ್ವಾಗತಿಸಿದರು. ನಿವೃತ್ತ ಕೃಷಿ ಅಧಿಕಾರಿ ಸುಬ್ರಹ್ಮಣ್ಯ ಕಾರ್ಯಕ್ರಮ ನಿರೂಪಿಸಿದರು. ಲೋಕೇಶ್ವರ್ ವಂದಿಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!