ಎಂ.ಬಿ.ಭಾನುಪ್ರಕಾಶ್ ನಿಧನಕ್ಕೆ ವಿಜಯೇಂದ್ರ ಸಂತಾಪ

Written by malnadtimes.com

Published on:

Bangalore | ಬಿಜೆಪಿ ಹಿರಿಯ ಮುಖಂಡ ಎಂ.ಬಿ.ಭಾನುಪ್ರಕಾಶ್ (68) ಅವರ ನಿಧನ ಅತ್ಯಂತ ದುಃಖಕರ ವಿಚಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀವ್ರ ಸಂತಾಪ ಸೂಚಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ನಮ್ಮೆಲ್ಲ ಹಿರಿಯರು, ಮಾರ್ಗದರ್ಶಕರು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರು, ವಿಧಾನಪರಿಷತ್ ಮಾಜಿ ಸದಸ್ಯ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾತ್ರವಲ್ಲದೆ, ಪ್ರಕೋಷ್ಠಗಳ ರಾಜ್ಯ ಸಂಯೋಜಕರಾಗಿ ಹಾಗೂ ಕರಾವಳಿ ಕರ್ನಾಟಕದ ಲೋಕಸಭಾ ಕ್ಲಸ್ಟರ್ ಪ್ರಮುಖರಾಗಿ ಅವರು ಅತ್ಯಂತ ಸಕ್ರಿಯವಾಗಿ ಕೆಲಸ ಮಾಡಿದವರು ಎಂದು ತಿಳಿಸಿದ್ದಾರೆ.

ಭಾನುಪ್ರಕಾಶ್ ಕೊನೆಯ ಭಾಷಣದ ಚಿತ್ರ

ಅವರ ಕುಟುಂಬಸ್ಥರು ಬಂಧುಮಿತ್ರರು ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.

ಬಿಜೆಪಿ ಹಿರಿಯ ಮುಖಂಡ ಎಂ.ಬಿ. ಭಾನುಪ್ರಕಾಶ್ ಇನ್ನಿಲ್ಲ !

Leave a Comment