ಹೊಸನಗರ ; ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಗ್ರಾಮ ಸಹಾಯಕರ ಸಂಘದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ವಿರುದ್ಧ ರಾಜ್ಯ ಸಂಘದ ವತಿಯಿಂದ ಗುರುವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಪ್ರತಿಭಟನೆಗೆ ಭಾಗವಹಿಸಲು ಅನುಮತಿ ನೀಡಬೇಕೆಂದು ಹೊಸನಗರ ತಾಲ್ಲೂಕು ಗ್ರಾಮ ಸಹಾಯಕರ ಸಂಘದ ಅಧ್ಯಕ್ಷ ಬಾಳೆಕೊಪ್ಪ ನಾಗಪ್ಪ ನೇತೃತ್ವದಲ್ಲಿ ತಹಶೀಲ್ದಾರ್ ರಶ್ಮಿ ಹಾಲೇಶ್‌ರಿಗೆ ಮನವಿ ಸಲ್ಲಿಸಿದರು.
ಜೂ.19 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯಾದ್ಯಂತ 10,450 ಗ್ರಾಮ ಸಹಾಯಕರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ಧಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದು, ಸುಮಾರು 45 ವರ್ಷಗಳಿಂದ ಗ್ರಾಮ ಸಹಾಯಕರಾಗಿ ಸೇವೆ ಸಲ್ಲಿಸುತ್ತ ಬಂದಿರುವ ನಾವು ಕಳೆದ 2 ವರ್ಷಗಳಿಂದ ಬೆಳಗಾವಿಯ ಅಧಿವೇಶನ ಸಮಯದಲ್ಲಿ ಗ್ರಾಮ ಸಹಾಯಕರು ವಿವಿಧ ಬೇಡಿಕೆಗಾಗಿ ಮುಷ್ಕರ ಕೈಗೊಂಡಿದ್ದು ಆ ವೇಳೆಯಲ್ಲಿ ಕರ್ನಾಟಕ ಸರ್ಕಾರದ ಪರವಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ಗ್ರಾಮ ಸಹಾಯಕರ ಮನವಿಯನ್ನು ಸ್ವೀಕರಿಸಿ ನಿಮ್ಮ ಬೇಡಿಕೆಗಳನ್ನು ಅತಿ ಶೀಘ್ರವಾಗಿ ಈಡೇರಿಸುವ ಭರವಸೆ ನೀಡಿದ್ದರು. ಆದರೆ 2 ವರ್ಷಗಳಾದರೂ ಕೂಡ ಭರವಸೆ ಈಡೇರಿಸದ ಕಾರಣ ಹೊಸನಗರ ತಾಲ್ಲೂಕಿನ ಎಲ್ಲಾ ಗ್ರಾಮ ಸಹಾಯಕರು ಈ ಮುಷ್ಕರದಲ್ಲಿ ಭಾಗವಹಿಸುವ ಸಲುವಾಗಿ ಕೇಂದ್ರ ಸ್ಥಾನವನ್ನು ಬಿಡಲು ಅನುಮತಿ ನೀಡುವಂತೆ ತಹಶೀಲ್ದಾರ್‌ರಿಗೆ ಮನವಿ ಮಾಡಿಕೊಂಡಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.