ಹೊಸನಗರ ; ಹಲವು ದಶಕಗಳ ಕಾಲ ನನೆಗುದಿಗೆ ಬಿದ್ದಿದ್ದ ವಾಸಸ್ಥಳದ ಮೇಲಿನ ಹಕ್ಕು ಕುರಿತಂತೆ ಸೊನಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಒಟ್ಟು 12 ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕುಪತ್ರ ವಿತರಿಸಿದ ಹಿನ್ನಲೆಯಲ್ಲಿ ಗ್ರಾಮ ಪಂಚಾಯತಿ ಸದಸ್ಯ ಕೊಳಗಿ ಸತೀಶ್ ನೇತೃತ್ವದಲ್ಲಿ ಮಾಜಿ ಸಚಿವ, ಹಾಲಿ ಶಾಸಕ ಆರಗ ಜ್ಞಾನೇಂದ್ರ ಅವರಿಗೆ ಗ್ರಾಮಸ್ಥರು ಶಾಲು ಹೊಂದಿಸಿ ಅಭಿನಂದನೆ ಸಲ್ಲಿಸಿದರು.
ಈ ವೇಳೆ ತಹಶೀಲ್ದಾರ್ ರಶ್ಮಿ ಹಾಲೇಶ್, ತಾಲೂಕು ಪಂಚಾಯತಿ ವ್ಯವಸ್ಥಾಪಕ ಶಿವಕುಮಾರ್, ಸಿಬ್ಬಂದಿ ಮೇಘ ಸೇರಿದಂತೆ ಹಲವರು ಉಪಸ್ಥಿತರಿದ್ದರು.