Hosanagara

ಹೊಸನಗರ ದಸರಾ ಆಚರಣಾ ಸಮಿತಿಯ ಅಧ್ಯಕ್ಷರಾಗಿ ವಿನಯ್‌ಕುಮಾರ್ ದುಮ್ಮ ಆಯ್ಕೆ

HOSANAGARA ; ಹೊಸನಗರದಲ್ಲಿ ಪ್ರತಿವರ್ಷ ಅದ್ದೂರಿ ದಸರಾ ಸಮಾರಂಭವನ್ನು ಮೈಸೂರು ದಸರಾ ಉತ್ಸವದಂತೆ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತಿದ್ದು ಈ ವರ್ಷ ದಸರಾ ಉತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಳೂರು ಸೊಸೈಟಿಯ ಅಧ್ಯಕ್ಷ ಹಾಗೂ ತುಂಗಾ ಅಡಿಕೆ ಮಂಡಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಉತ್ತಮ ಬಜೆಟ್ ನೀಡಿರುವ ವಿನಯ್‌ಕುಮಾರ್ ದುಮ್ಮರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಕಾರ್ಯರ್ಶಿಯಾಗಿ ಪಟ್ಟಣ ಪಂಚಾಯತಿ ಸದಸ್ಯ ಅಶ್ವಿನಿಕುಮಾರ್‌ರನ್ನು ನಿರ್ವಹಿಸಲಿದ್ದು ಉಳಿದಂತೆ ನಾಡಹಬ್ಬಗಳ ಸಮಿತಿಯ ಅಧ್ಯಕ್ಷರಾದ ತಹಶೀಲ್ದಾರ್ ರಶ್ಮಿ ಹಾಲೇಶ್ ಸದಸ್ಯರಾದ ಶ್ರೀನಿವಾಸ್ ಕಾಮತ್, ಎನ್. ಶ್ರೀಧರ ಉಡುಪ, ಅಂಜನ್ ಟೆಕ್ಸ್ ಟೈಲ್ಸ್ ರಾಜಮೂರ್ತಿ ವರ್ತಕರ ಸಂಘದ ಅಧ್ಯಕ್ಷ ವಿಜೇಂದ್ರ ಶೆಟ್ ವಿವಿಧ ಸಂಘ ಸಂಸ್ಥೆಯ ಅಧ್ಯಕ್ಷ ಸದಸ್ಯರುಗಳು ಹಾಗೂ ಸರ್ಕಾರಿ ಎಲ್ಲ ಕಛೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.


ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ ಮುಂದುವರಿಕೆ, ಸಾರ್ವಜನಿಕರು ಸಹಕರಿಸಲು ಮನವಿ

HOSANAGARA ; ಕೆಲವು ದಿನಗಳಿಂದ ನಡೆಯುತ್ತಿರುವ ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ ಮುಂದುವರೆದಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಗ್ರಾಮ ಆಡಳಿತಾಧಿಕಾರಿಗಳ ತಾಲ್ಲೂಕು ಸಂಘದ ಅಧ್ಯಕ್ಷ ನವೀನ್ ಕುಮಾರ್‌ ಹಾಗೂ ಕಸಬಾ ಹೋಬಳಿ ಗ್ರಾಮ ಆಡಳಿತಾಧಿಕಾರಿ ಕೌಶಿಕ್ ಮನವಿ ಮಾಡಿದ್ದಾರೆ.

ನಾವು ಕೆಲವು ದಿನಗಳಿಂದ ತಮ್ಮ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಈಗಾಗಲೇ ಸಾಕಷ್ಟು ಬಾರಿ ಮನವಿ ಮಾಡಿದ್ದು ಇದರ ಜೊತೆಗೆ ಕೆಲಸಕ್ಕೆ ಹಾಜರಾಗದೇ ಮುಷ್ಕರ ನಡೆಸುತ್ತಿದ್ದರೂ ಸರ್ಕಾರ ಸ್ಪಂದಿಸಿಲ್ಲ. ಅದು ಅಲ್ಲದೇ ಸೆಪ್ಟೆಂಬರ್ 30ರಂದು ನಮ್ಮ ರಾಜ್ಯ ಸಂಘದ ಪದಾದಿಕಾರಿಗಳು ಹಾಗೂ ಜಿಲ್ಲಾಧ್ಯಕ್ಷಗಳು ಕಂದಾಯ ಸಚಿವ ಕೃಷ್ಣಬೈರೇಗೌಡರೊಂದಿಗೆ ನಡೆದ ಸಭೆ ವಿಫಲವಾಗಿದ್ದು ಈಗಾಗಲೇ ನಿರ್ಣಯಿಸಿದಂತೆ ನಮ್ಮ ಮೂಲಭೂತ ಬೇಡಿಕೆಗಳನ್ನು ಸರ್ಕಾರ ಈಡೇರಿಸುವವರೆವಿಗೂ 30 ದಿನಗಳ ಪರಿವರ್ತಿತ ರಜೆ ಹಾಕಿ ಎಲ್ಲ ಕೆಲಸಗಳನ್ನು ಸ್ಥಗಿತಗೊಳಿಸಿ ಕಛೇರಿಗೆ ಹೋಗದಂತೆ ಮುಷ್ಕರವನ್ನು ಮುಂದುವರೆಸಿರುವುದಾಗಿ ಈ ಮೂಲಕ ತಿಳಿಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>