VISL Bhadravati :ಶಿವಮೊಗ್ಗ ಜಿಲ್ಲೆಯ ವಿಐಎಸ್‌ಎಲ್ ಕಾರ್ಖಾನೆಯನ್ನು ಪುನರಾರಂಭಿಸುವ ನಿಟ್ಟಿನಲ್ಲಿ 10 ಸಾವಿರ ಕೋಟಿ ರೂ. ಹೂಡಿಕೆಗೆ ಕೇಂದ್ರ ಕೈಗಾರಿಕಾ ಸಚಿವರಾದ ಮಾನ್ಯ ಹೆಚ್.ಡಿ. ಕುಮಾರಸ್ವಾಮಿ ಅವರು ನೀಡಿರುವ ಘೋಷಣೆಯನ್ನು ಸಂಸದ ಬಿ.ವೈ. ರಾಘವೇಂದ್ರ ಅವರು ಅಭಿನಂದಿಸಿದ್ದಾರೆ.
ವಿಐಎಸ್‌ಎಲ್ ಕಾರ್ಖಾನೆಯ ಪುನರುಜ್ಜೀವನಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಇಚ್ಚಾಶಕ್ತಿ ಕಾರಣವಾಗಿದೆ ಎಂದು ಸಂಸದರು ತಿಳಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಕಾರ್ಖಾನೆಯನ್ನು ಉಳಿಸಲು ಸತತ ಪ್ರಯತ್ನವನ್ನು ನಡೆಸಿದ್ದು ಈಗ ಫಲವನ್ನು ನೀಡಿದೆ ಎಂದು ಸಹಾ ಅವರು ಹೇಳಿದ್ದಾರೆ.
ಸರ್ ಎಂ ವಿಶ್ವೇಶ್ವರಯ್ಯನವರು ಸ್ಥಾಪಿಸಿದ ಈ ಕಾರ್ಖಾನೆಯು ಸಾವಿರಾರು ಜನ ಕಾರ್ಮಿಕರಿಗೆ ಉದ್ಯೋಗ ಮತ್ತು ಜೀವನವನ್ನು ನೀಡಿತ್ತು, ಆದರೆ ಕೆಲವೊಂದು ತಾಂತ್ರಿಕ ಕಾರಣಗಳಿಂದಾಗಿ ಸಮಸ್ಯೆ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ಸಂಸದರು ನಿರಂತರವಾಗಿ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚೆ ನಡೆಸಿದ ಪರಿಣಾಮ ಈಗ ಕಾರ್ಖಾನೆ ಪುನಶ್ಚೇತನಗೊಳ್ಳುತ್ತಿರುವುದು ಸಂತೋಷದ ವಿಚಾರವಾಗಿದೆ.

ಈ ಕಾರ್ಖಾನೆಯ ಜೀರ್ಣೋದ್ಧಾರದ ಪ್ರಯತ್ನವಾಗಿ ಅಂದು ಕೇಂದ್ರ ಸಚಿವರಾದಂತಹ ಅನಂತಕುಮಾರ ಹೆಗಡೆ, ಉಕ್ಕು ಸಚಿವರಾದ ನರೇಂದ್ರಸಿಂಗ್ ತೋಮರ್, ಮನೋಜ್ ಸಿನ್ಹಾ ಹಾಗೂ ಬಿರೇನ್ ಸಿಂಗ್ ಅವರುಗಳು ಇಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಎಲ್ಲಾ ರೀತಿಯಲ್ಲಿ ಪುನಶ್ಚೇತನಕ್ಕಾಗಿ ತಮ್ಮ ಪ್ರಯತ್ನಗಳನ್ನು ಮಾಡಿದ್ದರು.
ವಿಐಎಸ್‌ಎಲ್ ಕಾರ್ಖಾನೆಯ ಉಳಿವಿಗಾಗಿ ಕೇಂದ್ರ ಸಚಿವರಾಗಿದ್ದ ಪ್ರಹ್ಲಾದ್ ಜೋಶಿ ಸಹಾ ಸಚಿವರುಗಳಿಗೆ ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದರು. ಇದೀಗ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಮೂರನೇ ಬಾರಿ ಅಧಿಕಾರಕ್ಕೆ ಬಂದಿದ್ದು, ರಾಜ್ಯದವರೇ ಆದ ಹೆಚ್ ಡಿ ಕುಮಾರಸ್ವಾಮಿ ಅವರು ಕೈಗಾರಿಕಾ ಸಚಿವರಾದ ಹಿನ್ನೆಲೆಯಲ್ಲಿ ಈ ವಿಷಯಕ್ಕೆ ಸೂಕ್ತ ಬೆಂಬಲ ದಕ್ಕಿದೆಯೆಂದು ಸಂಸದರು ತಿಳಿಸಿದ್ದಾರೆ.
ಸಂಸದ ಬಿ.ವೈ. ರಾಘವೇಂದ್ರ ಅವರು ಮಾತನಾಡುತ್ತಾ, ಕಾರ್ಖಾನೆಯ ಆಧುನೀಕರಣಕ್ಕಾಗಿ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿಗೆ ಮನವಿಯನ್ನು ಮಾಡಿದ್ದು, ಅವರು ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಹತ್ವಾಕಾಂಕ್ಷೆಯ ಯೋಜನೆ ರೂಪಿಸಿ ಚರ್ಚೆ ನಡೆಸಿ ಒತ್ತಾಯಿಸಿದ ಪರಿಣಾಮವಾಗಿ ಯೋಜನೆ ಇಂದು ಫಲ ನೀಡುತ್ತಿದೆ.
ಭದ್ರಾವತಿಯಿಂದ ಚಿತ್ರದುರ್ಗದ ಚಿಕ್ಕಜಾಜೂರು ಮಾರ್ಗಕ್ಕೆ ಮಂಜೂರಾತಿ ದೊರೆತಿದ್ದು, ಇದು ಕಾರ್ಖಾನೆಗೆ ಲಾಜಿಸ್ಟಿಕ್ ಬಲವನ್ನು ಇನ್ನಷ್ಟು ಹೆಚ್ಚಿಸಲಿದೆ. ಕಾರ್ಮಿಕರ ಪ್ರಾರ್ಥನೆ, ಮಠಾಧೀಶರ ಸಹಕಾರ ಹಾಗೂ ಸ್ಥಳೀಯ ಸಂಸ್ಥೆಗಳ ಬೆಂಬಲದೊಂದಿಗೆ ಈ ಪ್ರಯತ್ನ ಯಶಸ್ವಿಯಾಗಿದೆ ಎಂದವರು ಹೇಳಿದ್ದಾರೆ.
Read More
FASTag ವಾರ್ಷಿಕ ಪಾಸ್ : ಏನಿದು? ಪ್ರಸ್ತುತ ಬಳಕೆದಾರರ ಮೇಲೆ ಎಫೆಕ್ಟ್ ಆಗುತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ
ರಾಜ್ಯದ 5.58 ಲಕ್ಷ ರೈತರ ಖಾತೆಗೆ ಬೆಳೆ ವಿಮೆ ಆಗಿದೆ ಜಮೆ, ನಿಮಗೂ ಬಂದಿದ್ಯಾ? ಈ ರೀತಿ ಚೆಕ್ ಮಾಡಿ
ಜೂನ್ 30ರಿಂದ ಹಣ ಕಳಿಸುವ ಮೊದಲು ಫೋನ್ ಪೇ, ಗೂಗಲ್ ಪೇ ಬಗ್ಗೆ ತಿಳಿದುಕೊಂಡರೆ ಒಳ್ಳೆಯದು!
Author Profile
-
ಅವರು MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 2019ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಅವರು ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಅವರು ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.
Latest entries
AgricultureMay 28, 2025ರೈತರಿಗೆ ಮಿನಿ ಟ್ರ್ಯಾಕ್ಟರ್, ಪಾಲಿಹೌಸ್, ಹನಿ ನೀರಾವರಿ ಸಹಾಯಧನಕ್ಕೆ ಅರ್ಜಿ ಆಹ್ವಾನ!
AgricultureMay 28, 2025ರೈತರಿಗೋಸ್ಕರ ಬರೋಬ್ಬರಿ ಶೇ 90ರಷ್ಟು ಸಬ್ಸಿಡಿಯಲ್ಲಿ ಡೀಸೆಲ್ ಪಂಪ್ಸೆಟ್ ವಿತರಣೆ!ಇಂದೇ ಅಪ್ಲೈ ಮಾಡಿ
NewsMay 28, 2025ಶಿವಮೊಗ್ಗ- ಮೈಸೂರು ಎಕ್ಸ್ಪ್ರೆಸ್ ರೈಲಿನ ಲೇಟೆಸ್ಟ್ ಅಪ್ಡೇಟ್ !
Shivamogga NewsMay 27, 2025ವಿಐಎಸ್ಎಲ್ ಕಾರ್ಖಾನೆಗೆ ಕಾಯಕಲ್ಪ; ಕೈಗಾರಿಕಾ ಸಚಿವ ಕುಮಾರಸ್ವಾಮಿ ಹೇಳಿಕೆ ಬಿವೈಅರ್ ಮೆಚ್ಚುಗೆ