ಹೊಸನಗರ

ರಿಪ್ಪನ್‌ಪೇಟೆಯಲ್ಲಿ ಮತದಾರರ ಜಾಗೃತಿ ಜಾಥಾ: 18 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಹೆಸರು ನೋಂದಾಯಿಸಲು ಕರೆ

ಪ್ರಜಾಪ್ರಭುತ್ವದ ಮಹತ್ವವನ್ನು ಸಾರುವ ಭಾರತದಲ್ಲಿ 18 ವರ್ಷ ತುಂಬಿದ ಪ್ರತಿಯೊಬ್ಬ ನಾಗರಿಕನೂ ಕಡ್ಡಾಯವಾಗಿ ಮತದಾನದ ಹಕ್ಕು ಪಡೆದುಕೊಳ್ಳಬೇಕು ಎಂದು ಹೊಸನಗರ ತಾಲೂಕು ಪಂಚಾಯಿತಿ ಪ್ರಭಾರಿ ಕಾರ್ಯನಿರ್ವಹಣಾಧಿಕಾರಿ ನರೇಂದ್ರ ಕುಮಾರ್ ತಿಳಿಸಿದರು.

ರಿಪ್ಪನ್‌ಪೇಟೆಯಲ್ಲಿ ಮತದಾರರ ಜಾಗೃತಿ ಜಾಥಾ EO

ರಿಪ್ಪನ್‌ಪೇಟೆ: ಪ್ರಜಾಪ್ರಭುತ್ವದ ಮಹತ್ವವನ್ನು ಸಾರುವ ಭಾರತದಲ್ಲಿ 18 ವರ್ಷ ತುಂಬಿದ ಪ್ರತಿಯೊಬ್ಬ ನಾಗರಿಕನೂ ಕಡ್ಡಾಯವಾಗಿ ಮತದಾನದ ಹಕ್ಕು ಪಡೆದುಕೊಳ್ಳಬೇಕು ಎಂದು ಹೊಸನಗರ ತಾಲೂಕು ಪಂಚಾಯಿತಿ ಪ್ರಭಾರಿ ಕಾರ್ಯನಿರ್ವಹಣಾಧಿಕಾರಿ ನರೇಂದ್ರ ಕುಮಾರ್ ತಿಳಿಸಿದರು.

WhatsApp Group Join Now
Telegram Group Join Now
Instagram Group Join Now

ಕೆರೆಹಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಸಹಯೋಗದಲ್ಲಿ ರಿಪ್ಪನ್‌ಪೇಟೆಯಲ್ಲಿ ಆಯೋಜಿಸಲಾಗಿದ್ದ ಪ್ರಚಾರ ವಾಹನದ ಜಾಗೃತಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿ, ಪ್ರತಿಯೊಬ್ಬ ಅರ್ಹ ನಾಗರಿಕನೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿರುವುದನ್ನು ಪರಿಶೀಲಿಸಿಕೊಳ್ಳಬೇಕು. ಹೆಸರು ಅಥವಾ ವಿಳಾಸದಲ್ಲಿ ಏನಾದರೂ ಲೋಪದೋಷಗಳಿದ್ದರೆ ತಿದ್ದುಪಡಿ ಮಾಡಿಸಿಕೊಳ್ಳಲು ಇದು ಸೂಕ್ತ ಸಮಯ. ‘ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) 2026’ರ ಅಂಗವಾಗಿ ಈ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.

18 ವರ್ಷ ಪೂರ್ಣಗೊಂಡ ಯುವಜನತೆ ಅಗತ್ಯ ದಾಖಲೆಗಳೊಂದಿಗೆ ‘ಫಾರಂ-6’ ಭರ್ತಿ ಮಾಡಿ ತಮ್ಮ ವ್ಯಾಪ್ತಿಯ ಬಿಎಲ್‌ಒ (BLO) ಅವರಿಗೆ ಸಲ್ಲಿಸಬೇಕು. ಅಕ್ಟೋಬರ್ 1 ರಿಂದ 21 ರವರೆಗಿನ ನಿಗದಿತ ಸಮಯದಲ್ಲಿ ಅರ್ಜಿ ಸಲ್ಲಿಸಿದರೆ ಮಾತ್ರ ಮುಂಬರುವ ಚುನಾವಣೆಯಲ್ಲಿ ಮತದಾನದ ಹಕ್ಕು ಹಾಗೂ ಗುರುತಿನ ಚೀಟಿ (Voter ID) ಲಭ್ಯವಾಗಲಿದೆ ಎಂದು ಸ್ಪಷ್ಟಪಡಿಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಈ ಜಾಗೃತಿ ಜಾಥಾದಲ್ಲಿ ಪಂಚಾಯಿತಿ ಆಡಳಿತಾಧಿಕಾರಿ ರಾಜೇಂದ್ರಕುಮಾರ್, ಗ್ರಾಮ ಪಂಚಾಯಿತಿ ಪಿಡಿಒ ನಾಗರಾಜ್ ಎಸ್, ವಿವಿಧ ಗ್ರಾ.ಪಂ ಕಾರ್ಯದರ್ಶಿಗಳು ಹಾಗೂ ಸಿಬ್ಬಂದಿ ವರ್ಗದವರು, ಮತ್ತಿತರರು ಭಾಗವಹಿಸಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]