ಹೊಸನಗರ ; ರಾಜ್ಯಾದ್ಯಂತ ಮತದಾರ ಪಟ್ಟಿಯ ಮ್ಯಾಪಿಂಗ್ ನಡೆಯುತ್ತಿದ್ದು ಹೊಸನಗರ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮತಗಟ್ಟೆಗಳಲ್ಲಿ ಪ್ರಗತಿ ಕಡಿಮೆಯಾಗಿದ್ದು ಬಾಕಿ ಉಳಿದಿರುವ ವ್ಯಾಪಿಂಗ್ ಪೂರ್ಣಗೊಳಿಸುವ ಉದ್ದೇಶದಿಂದ ಹಾಗೂ ಪ್ರಗತಿ ಸಾಧಿಸಲು ಮಾ.31ರ ಮಂಗಳವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪಟ್ಟಣ ಪಂಚಾಯಿತಿಯ ಸಿ.ಡಿ.ಎಸ್ ಸಮುದಾಯ ಭವನದ ಆವರಣದಲ್ಲಿ ಮ್ಯಾಪಿಂಗ್ ಕಾರ್ಯ ನಡೆಯಲಿದ್ದು ಮ್ಯಾಪಿಂಗ್ ಮಾಡುವ ಅಧಿಕಾರಿಗಳು ಅಲ್ಲೆ ಇರುತ್ತಾರೆ ಎಂದು ಹೊಸನಗರ ತಹಸೀಲ್ದಾರ್ ಭರತ್‌ರಾಜ್ ತಿಳಿಸಿದ್ದಾರೆ.
ಇಲ್ಲಿಯವರೆಗೆ ಅಂದರೆ 2002ರ ನಂತರ ಯಾರು ಮದುವೆಯಾಗಿ ಬಂದವರು ಹಾಗೂ ಯಾರು ಇಲ್ಲಿಯವರೆವಿಗೆ ಮ್ಯಾಪಿಂಗ್ ಮಾಡಿಸಿಕೊಳ್ಳದವರು ಆಗಮಿಸಿ ಮ್ಯಾಪಿಂಗ್ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದ್ದು ಈಗಾಗಲೇ ಪಟ್ಟಣ ಪಂಚಾಯತಿಯ ವತಿಯಿಂದ ಪ್ರಚಾರ ಕಾರ್ಯ ನಡೆಸಲಾಗುತ್ತಿದ್ದು ಮತಗಟ್ಟೆ ಮ್ಯಾಪಿಂಗ್ ಮಾಡಿಸಿಕೊಳ್ಳದವರು ಮುಂದಿನ ಎಲ್ಲ ಚುನಾವಣೆಯಲ್ಲಿ ಮತ ಹಾಕುವ ಹಕ್ಕು ಕಳೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

