ಶಿವಮೊಗ್ಗ:ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆ ಫೆಬ್ರವರಿ 07ರಂದು ವಿದ್ಯಾನಗರ ಮಧ್ಯಂತರ ಯಂತ್ರಗಾರಕ್ಕೆ ವಿದ್ಯುತ್ ನಿಲುಗಡೆ ಮಾಡಲಾಗುತ್ತಿದೆ. ಇದರ ಪರಿಣಾಮವಾಗಿ ಫೆಬ್ರವರಿ 07 ಹಾಗೂ 08ರಂದು ಮಲವಗೊಪ್ಪ ಮತ್ತು ಹರಿಗೆ ಪ್ರದೇಶಗಳಲ್ಲಿ ದೈನಂದಿನ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮಟ್ಟಿಗೆ ನೀರನ್ನು ಸಂಗ್ರಹಿಸಿಕೊಳ್ಳುವಂತೆ ಹಾಗೂ ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಡಿಯುವ ನೀರಿನ ವ್ಯತ್ಯಯದಿಂದ ಸಾರ್ವಜನಿಕರು ಅನಗತ್ಯ ತೊಂದರೆ ಅನುಭವಿಸದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

